ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ, ಪ್ರಿಯಾಂಕಾ,ರಾಹುಲ್ ಪೊಲೀಸ್ ವಶಕ್ಕೆ

ನವದೆಹಲಿ: ನಿರುದ್ಯೋಗ,ಹಣದುಬ್ಬರ,ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್ ಟಿ ಏರಿಕೆ ವಿರೋಧಿಸಿ ರಾಷ್ಟ್ರೀಯ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿದೆ.ಪ್ರತಿಭಟನೆಯ ಭಾಗವಾಗಿ `ಪ್ರಧಾನಿ ಮನೆಗೆ ಘೆರಾವ್’ ಹಾಕಲು ಮುಂದಾಗಿದೆ. ಈಗಾಗಲೇ ಸಂಸತ್ ಭವನದಿಂದ `ಚಲೋ ರಾಷ್ಟ್ರಪತಿ ಭವನ್’ ಮೆರವಣಿಗೆ ಆರಂಭಿಸಿದ್ದು, ಧಿಕ್ಕಾರ ಕೂಗುತ್ತಾ ಕಾಲ್ನಡಿಗೆ ಕೈಗೊಂಡಿದ್ದರು.

ಇದರ ನಡುವೆ ಪ್ರತಿಭಟನೆಯ ಸಮಯದಲ್ಲಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಎಐಸಿಸಿ ಕಚೇರಿ ಬಳಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳ ಮೇಲಿಂದ ಜಿಗಿಯಲು ಯತ್ನಿಸಿದ ಘಟನೆ ಜರುಗಿತು. ನಂತರ ಅವರನ್ನು ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಇನ್ನು ಕೇಂದ್ರ ಸರ್ಕಾರದ ವೈಫಲ್ಯದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಜೋರಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ನಡುವೆ ಪೊಲೀಸರು ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Edited By : Nirmala Aralikatti
PublicNext

PublicNext

05/08/2022 02:22 pm

Cinque Terre

70.25 K

Cinque Terre

15