ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅರಣ್ಯ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ನಾಗಮಂಗಲ ಶಾಸಕ ಸುರೇಶ್ ಗೌಡ ವಿರುದ್ಧ ಎಫ್ ಐಆರ್!

ಮಂಡ್ಯ: ಅರಣ್ಯ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ಶಾಸಕ ನಿಂದಿಸಿದ ಘಟನೆ ನಾಗಮಂಗಲ ತಾಲೂಕಿನ ಹಾಲತಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ನಾಗಮಂಗಲ ಶಾಸಕ ಸುರೇಶ್ ಗೌಡ ಅಧಿಕಾರಿಗಳ ವಿರುದ್ಧ ಅಸಭ್ಯ ಪದ ಬಳಕೆ ಮಾಡಲಾಗಿದೆ ಎನ್ನಲಾಗಿದ್ದು, ಸದ್ಯ ಶಾಸಕ ಸುರೇಶ್ ಗೌಡ ಸೇರಿ 10 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಹಾಲ್ತಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಆ.4ರಂದು ನಡೆದಿದ್ದ ಶಾಸಕ, ರೈತರು ಹಾಗೂ ಇಲಾಖೆ ಸಿಬ್ಬಂದಿ ನಡುವಿನ ಜಗಳಕ್ಕೆ ಸಂಬಂಧಿಸಿದಂತೆ ದೂರು ಆರ್ ಎಫ್ ಒ ಸತೀಶ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಸೇರಿ 10 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿಗೆ ಪ್ರಾಣ ಬೆದರಿಕೆ, ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಅವ್ಯಾಚ್ಯ ಶಬ್ಧಗಳಿಂದ ನಿಂದನೆ ಕುರಿತು ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಕೆಲವರು ಒತ್ತುವರಿ ಮಾಡಿಕೊಂಡಿರುವ ಆರೋಪವಿದ್ದು, ಒತ್ತುವರಿ ತೆರವು ಮಾಡಲು ಹೋದಾಗ ಶಾಸಕರು ಸರ್ಕಾರಿ ಕೆಲಸಕ್ಕೆ ಅಡ್ಡಿ ಮಾಡುವ ಜತೆಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.

Edited By : Nirmala Aralikatti
PublicNext

PublicNext

06/08/2022 12:12 pm

Cinque Terre

43.71 K

Cinque Terre

3

ಸಂಬಂಧಿತ ಸುದ್ದಿ