ನವದೆಹಲಿ: ದೇಶದ ನೂತನ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಆಯ್ಕೆಯಾಗಿದ್ದಾರೆ.
ಉಪರಾಷ್ಟ್ರಪತಿ ಸ್ಥಾನಕ್ಕೆ ಶನಿವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿದ್ದ ಕರ್ನಾಟಕದ ರಾಜಕಾರಣಿ ಮಾರ್ಗರೇಟ್ ಆಳ್ವಾ ಅವರ ವಿರುದ್ಧ ಜಗದೀಪ್ ಧನಕರ್ ಅವರು 346 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಚಲಾವಣೆಯಾದ ಒಟ್ಟು 725 ಜಗದೀಪ್ ಧನಕರ್ ಒಟ್ಟು 528 ಮತಗಳನ್ನು ಪಡೆದರೆ, ಆಳ್ವಾ 182 ಮತಗಳನ್ನು ಪಡೆದುಕೊಂಡಿದ್ದಾರೆ.
PublicNext
06/08/2022 08:04 pm