ಗದಗ: ಮಳೆಯಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೂ ಪರಿಹಾರ ಕೊಡೋದಕ್ಕೆ ರಾಜ್ಯ ಸರ್ಕಾರ ಮುಂದಾಗ್ತಿಲ್ಲ ಎಂದು ಗದಗ ಶಾಸಕ ಎಚ್.ಕೆ.ಪಾಟೀಲ್ ಆರೋಪಿಸಿದ್ದಾರೆ.
ಮಳೆಯಿಂದಾಗಿ ಕೃಷಿಕ ಕುಟುಂಬ ಮತ್ತೊಮ್ಮೆ ಭಾರೀ ತೊಂದ್ರೆ ಅನುಭವಿಸುತ್ತಿದ್ದಾರೆ. ಬೆಳೆದು ನಿಂತ ಬೆಳೆಯೂ ನೆಲ ಕಚ್ಚುತ್ತಿದೆ. ಫಸಲು ಕೈ ಸೇರುವ ಲಕ್ಷಣಗಳು ಕಾಣುತ್ತಿಲ್ಲ. ಇನ್ನೂ ಮಳೆ ನಿಲ್ಲುವ ಲಕ್ಷಣವೂ ಕಾಣುತ್ತಿಲ್ಲ. ಬೆಳೆಗಳು ಎಲ್ಲಾ ಹಾಳಾಗಿವೆ.
ಬೆಳೆ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡ್ಬೇಕೆಂದು ಮುಖ್ಯಮಂತ್ರಿಗಳಿಗೆ ಎಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ.
ಬಿದ್ದ ಮನೆಗಳಿಗೆ ಪರಿಹಾರ ನೀಡ್ಬೇಕಾದ ಸರ್ಕಾರ ಗಪ್ ಚುಪ್ ಕೊತಿದೆ. ಹತ್ತು ದಿನದ ಹಿಂದೆ ಮಳೆಯಿಂದಾಗಿ ಹಾನಿಗೊಳಗಾದವರಿಗೆ ಇನ್ನೂ ಹಣ ಮುಟ್ಟಿಲ್ಲ. ತಕ್ಷಣಕ್ಕೆ ಪರಿಹಾರ ಬಿಡುಗಡೆ ಮಾಡುವಂತೆ ಸರಕಾರ ಕ್ರಮಕೈಗೊಳ್ಳಬೇಕು. ಇನ್ನೂ ರಾಜ್ಯದ ಮುಖ್ಯಮಂತ್ರಿಗಳಿಗೆ ವಿನಂತಿ ಮಾಡ್ತೀನಿ, ಆದಷ್ಟೂ ಬೇಗ ರಸ್ತೆ ರಿಪೇರಿ ಮಾಡ್ಸಿ ಗುಂಡಿಯಿಂದಾಗಿ ರಸ್ತೆ ಮೇಲೆ ಸಂಚಾರ ಮಾಡಲು ಆಗ್ತಿಲ್ಲ ಎಂದು ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
PublicNext
07/08/2022 04:39 pm