ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಮ್ಮನ್ನು ಮೂಲೆಗುಂಪು ಮಾಡುವ ನಿಟ್ಟಿನಲ್ಲಿ ಬಿಬಿಎಂಪಿ ಮೀಸಲಾತಿ ರೂಪಿಸಲಾಗಿದೆ: ಡಿಕೆಶಿ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದರ ಅಂಗವಾಗಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರವಾಸ ಮಾಡುತ್ತಿದ್ದೇನೆ. ಸರ್ಕಾರ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸಲು ಬೇಕಾಬಿಟ್ಟಿಯಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಇದರ ವಿರುದ್ಧ ನಮ್ಮ ಪಕ್ಷದ ನಾಯಕರು ಪ್ರತಿಭಟಿಸಿ, ನಗರಾಭಿವೃದ್ಧಿ ಇಲಾಖೆ ಕಚೇರಿಗೆ ಬಿಜೆಪಿ ಕಚೇರಿ ಎಂದು ನಾಮಫಲಕ ಹಾಕಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಕಾರ ಮಾಡಿದ್ದು ತಪ್ಪು ಎಂದು ಹೇಳಬೇಕಾಗಿರುವುದು ನಮ್ಮ ಕರ್ತವ್ಯ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹಿಂದುಳಿದವರು, ಪರಿಶಿಷ್ಟರು, ಮಹಿಳೆಯರಿಗೆ ನೀಡಬೇಕಾದ ಮೀಸಲಾತಿಯನ್ನು ಸರಿಯಾಗಿ ಹಂಚಿಕೆ ಮಾಡಿಲ್ಲ. ಬೊಮ್ಮನಹಳ್ಳಿ ಕ್ಷೇತ್ರದ 14 ವಾರ್ಡ್ ಗಳ ಪೈಕಿ 9 ವಾರ್ಡ್ ಗಳಿಗೆ ಮಹಿಳಾ ಮೀಸಲಾತಿ ನೀಡಿದ್ದಾರೆ. ಜಯನಗರದಲ್ಲಿ ಒಂಬತ್ತಕ್ಕೆ ಎಂಟು ವಾರ್ಡ್, ಬಿಟಿಎಂ ಲೇಔಟ್ ನಲ್ಲಿ 8 ವಾರ್ಡ್ ಹಾಗೂ ಗಾಂಧಿ ನಗರದಲ್ಲಿ 7 ಕ್ಕೆ 7 ವಾರ್ಡ್ ಗಳಲ್ಲಿ, ಚಾಮರಾಜಪೇಟೆಯ 6 ವಾರ್ಡ್ ಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿದ್ದಾರೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಒಟ್ಟು 93 ವಾರ್ಡ್ ಗಳ ಪೈಕಿ 76 ಕಡೆ ಮಹಿಳೆಯರಿಗೆ ಮೀಸಲಾತಿ ನೀಡಿದ್ದಾರೆ. ಇದು ನ್ಯಾಯವೋ, ಅನ್ಯಾಯವೋ ನೀವೇ ತೀರ್ಮಾನಿಸಿ ಎಂದರು.

ನೆಹರು ಅವರು ಕೂಡ ಅಲಹಾಬಾದ್ ಪಾಲಿಕೆ ಅಧ್ಯಕ್ಷರಾಗಿ ಕೆಲಸ ಮಾಡಿದವರು. ಕೆಂಗಲ್ ಹನುಮಂತಯ್ಯ ಅವರು ಬೆಂಗಳೂರು ಪಾಲಿಕೆ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ವಿಲಾಸ್ ರಾವ್ ದೇಶ್ ಮುಖ್ ಕೂಡ ಪಂಚಾಯ್ತಿ ಅಧ್ಯಕ್ಷರಾಗಿದ್ದರು. ಬಿ.ಡಿ ಜತ್ತಿ ಅವರೂ ಕೂಡ ಪಂಚಾಯ್ತಿ ಅಧ್ಯಕ್ಷರಾಗಿದ್ದರು. ಈಗಿನ ರಾಷ್ಟ್ರಪತಿಗಳು ಕೂಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಕೆಲಸ ಮಾಡಿದ್ದಾರೆ. ಭವಿಷ್ಯದಲ್ಲಿ ಶಾಸಕರಾಗುವವರಿಗೆ ಇದು ಬಹುಮುಖ್ಯ ಚುನಾವಣೆ ಎಂದು ಡಿಕೆಶಿ ಹೇಳಿದರು.

Edited By : Nagaraj Tulugeri
PublicNext

PublicNext

07/08/2022 05:23 pm

Cinque Terre

24.93 K

Cinque Terre

3

ಸಂಬಂಧಿತ ಸುದ್ದಿ