ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಆಗಸ್ಟ್ 15 ರೊಳಗೆ ರಾಜ್ಯದಲ್ಲಿ ಸಿ.ಎಂ.ಬದಲಾವಣೆ.!

ತುಮಕೂರು: ಆಗಸ್ಟ್ 15 ರ ಒಳಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಬಹುದು ಎಂದು ಮಾಜಿ ಶಾಸಕ ಬಿ.ಸುರೇಶ್ ಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ತುಮಕೂರು ಗ್ರಾಮಾಂತರ ಹಾಲಗೊಂಡನಹಳ್ಳಿ ಕೆರೆಗೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಅವರು, ಬಿಜೆಪಿ ಪಕ್ಷ ವಿಧಾನ ಸಭಾ ಚುನಾವಣೆ 6-8 ತಿಂಗಳು ಇರಬೇಕಾದರೂ ಮುಖ್ಯಮಂತ್ರಿ ಬದಲಾವಣೆ ಮಾಡಿದ ಉದಾಹರಣೆ ಇದೆ. ಆದರೆ ಪಕ್ಷ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಅದಕ್ಕೆ ನಾವು ಬದ್ದರಾಗಿದ್ದೇವೆ ಎಂದರು.

ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಆಗುತ್ತಾರೆ ಎಂಬ ವಿಚಾರ ಗೊತ್ತಿಲ್ಲ. ನಾನು ಅವರನ್ನು ಭೇಟಿಯಾಗಿದ್ದೆ.ಅವರು ಅದರ ಬಗ್ಗೆ ಮಾತನಾಡಿಲ್ಲ.ಅದು ಮಾಧ್ಯಮದ ಸೃಷ್ಟಿ.ಶೋಭ ಕರಂದ್ಲಾಜೆ ಮುಖ್ಯಮಂತ್ರಿ ಆದರೆ ಸಂತೋಷವೇ ಎಂದು ಹೇಳಿದರು.

Edited By : Manjunath H D
PublicNext

PublicNext

08/08/2022 02:25 pm

Cinque Terre

68.78 K

Cinque Terre

6

ಸಂಬಂಧಿತ ಸುದ್ದಿ