ಬೆಂಗಳೂರು: ಅದ್ಧೂರಿಯಾಗಿ ಸಿದ್ದರಾಮೋತ್ಸವ ಮುಗಿಸಿರುವ ಕಾಂಗ್ರೆಸ್ ನಾಯಕರು ಈಗ ಮತ್ತೊಂದು ಸಮಾವೇಶಕ್ಕೆ ತಯಾರಾಗಿದ್ದಾರೆ. ಈ ಸಮಾವೇಶವನ್ನು ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲೇ ನಡೆಯಲಿದೆ ಎನ್ನಲಾಗಿದೆ. ವಿಶೇಷ ಅಂದ್ರೆ ಸ್ವಾತಂತ್ರ್ಯ ದಿನವಾದ ಆ.15ರಂದೇ ಬೆಂಗಳೂರಿನಲ್ಲಿ ಈ ಸಮಾವೇಶ ನಡೆಯಲಿದೆ. ಇದೇ ವೇಳೆ ಪಾದಯಾತ್ರೆಯೂ ನಡೆಯಲಿದೆ. ಇದಕ್ಕಾಗಿ ಕಾಂಗ್ರಸ್ ನಾಯಕರು ಭರ್ಜರಿ ಸಿದ್ಧತೆ ನಡೆಸಿದ್ದಾರೆ.
ಇನ್ನು ಸಮಾವೇಶಕ್ಕೆ ಮೊದಲ ಬಾರಿಗೆ ಹೈಕಮಾಂಡ್ ವರಿಷ್ಠೆ ಪ್ರಿಯಾಂಕಾ ಗಾಂಧಿ ಅವರನ್ನು ಬೆಂಗಳೂರಿಗೆ ಕರೆಸಿ, ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮನವೊಲಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಗಾಂಧೀಜಿ ಅವರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸ್ವಾಭಿಮಾನ ಪ್ರತೀಕವಾಗಿರುವ ಪಾದಯಾತ್ರೆ ಮೂಲಕ ರಾಜ್ಯದ ಪ್ರತಿ ಜಿಲ್ಲೆಯಲ್ಲೂ 75 ಕಿ.ಮೀ ದೂರ ಹೆಜ್ಜೆ ಹಾಕಿ ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಿಸಲು ತೀರ್ಮಾನಿಸಿ, ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಕ್ಷದ ನಾಯಕರು ಪಾದಯಾತ್ರೆ ಆರಂಭಿಸಿದ್ದಾರೆ. ಇದರ ಅಂತಿಮ ಚರಣ ಆ. 15ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಅದಕ್ಕೆ ಅಭೂತಪೂರ್ವ ಕಾರ್ಯಕ್ರಮದ ಸ್ವರೂಪ ನೀಡಲು ಸಕಲ ಸಿದ್ಧತೆಯನ್ನು ಡಿ.ಕೆ. ಶಿವಕುಮಾರ್ ನಡೆಸಿದ್ದಾರೆ.
PublicNext
09/08/2022 03:22 pm