ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಮಧ್ಯಾಹ್ನ ರಾಜ್ಯಪಾಲರನ್ನ ಭೇಟಿಯಾಗಿ ತಮ್ಮ ನಿರ್ಧಾರವನ್ನ ಪ್ರಕಟಿಸಿದ್ದು, ಈ ಮೂಲಕ ಬಿಜೆಪಿ ಮತ್ತು ಜೆಡಿಯು ನಡುವಿನ ಮೈತ್ರಿ ಮುರಿದುಕೊಂಡಿದ್ದಾರೆ.
ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಂಡಿರುವ ನಿತೀಶ್ ಕುಮಾರ್, ಇದೀಗ ಆರ್ ಜೆಡಿ ಜೊತೆ ಸರ್ಕಾರ ರಚನೆಗೆ ಸಿದ್ಧತೆ ನಡೆಸುತ್ತಿದ್ದಾರೆ. ಇಂದು ಬೆಳಿಗ್ಗೆ ಸಭೆ ನಡೆಸಿದ ಜೆಡಿಯುನ ಎಲ್ಲಾ ಶಾಸಕರು ಮತ್ತು ಸಂಸದರು ನಿತೀಶ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದಿದ್ದಾರೆ.
PublicNext
09/08/2022 05:37 pm