ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಸಿಎಂ ಆಗಿ ಬೊಮ್ಮಾಯಿ ಅವ್ರೇ ಮುಂದುವರಿಯುತ್ತಾರೆ: ರೇಣುಕಾಚಾರ್ಯ ವಿಶ್ವಾಸ

ದಾವಣಗೆರೆ: ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿ ಮುಂದುವರಿಯೋದು ಅಷ್ಟೇ ಸತ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬದಲಾವಣೆ ಹೇಳಿಕೆ ಊಹಾಪೋಹ. ಕಾಂಗ್ರೆಸ್ ನವರು ತಮ್ಮಲ್ಲಿರುವ ಭಿನ್ನಾಭಿಪ್ರಾಯ ಮುಚ್ಚಿಹಾಕಲು ಈ ರೀತಿ ಟ್ವೀಟ್ ಮಾಡಿದ್ದಾರೆ ಎಂದು ಹೇಳಿದರು‌.

ಕಾಂಗ್ರೆಸ್ ನವರು ಭ್ರಮೆಯ ಲೋಕದಲ್ಲಿದ್ದು, ಈ ರೀತಿ ಹಸಿ ಸುಳ್ಳು ಹೇಳುತ್ತಿದ್ದಾರೆ. ಮೊದಲು ಅವರು ತಮ್ಮಲ್ಲಿ ಇರುವ ಭಿನ್ನಾಭಿಪ್ರಾಯ ಸರಿಪಡಿಸಿಕೊಳ್ಳಲಿ. ಸಿಎಂ ಬದಲಾವಣೆ ಬಗ್ಗೆ ನೀಡಿರುವ ಹೇಳಿಕೆ ಮೂರ್ಖತನದ್ದು ಎಂದರು.

Edited By :
PublicNext

PublicNext

09/08/2022 10:15 pm

Cinque Terre

83.13 K

Cinque Terre

1

ಸಂಬಂಧಿತ ಸುದ್ದಿ