ಗದಗ: ಗದಗ ಜಿಲ್ಲೆಗೆ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಹುದ್ದೆ ಖಾಲಿ ಇರುವ ವಿಚಾರದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಜೊತೆಯಲ್ಲಿ ಮಾತನಾಡುತ್ತೇನೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.
ನಾನು ಹತ್ತು ದಿನ ಯೂರೋಪ್ ದೇಶಕ್ಕೆ ಹೋಗಿದ್ದೆ. ಈಗ ಬಂದಿದ್ದೇನೆ ಜಿಲ್ಲಾಧಿಕಾರಿ ಯಾಕೆ ನೇಮಕವಾಗಿಲ್ಲ ಎಂಬುದು ಗೊತ್ತಿಲ್ಲ. ಶೀಘ್ರದಲ್ಲೇ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿಯನ್ನು ನೇಮಕ ಮಾಡಲಾಗುವುದೆಂದು ಬಿ.ಸಿ ಪಾಟೀಲ್ ಹೇಳಿದ್ದಾರೆ.
PublicNext
10/08/2022 08:21 am