ಪಾಟ್ನಾ : ನಿತೀಶ್ ಕುಮಾರ್ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಂಗಳವಾರ ಎನ್ ಡಿ ಎ ಜೊತೆಗಿನ ಮೈತ್ರಿಗೆ ಗುಡ್ ಬೈ ಹೇಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಇಂದು ಬಿಹಾರದಲ್ಲಿ ಮಹಾಘಟಬಂಧನ ಸರ್ಕಾರ ರಚನೆಯಾಗಿದ್ದು, ನಿತೀಶ್ ಕುಮಾರ್ ಅವರು ದಾಖಲೆಯ 8 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿತೀಶ್ ಕುಮಾರ್ ಅವರಿಗೆ ರಾಜ್ಯಪಾಲ ಫಗು ಚೌಹಾಣ್ ಅವರು ಪ್ರಮಾಣ ವಚನ ಬೋಧಿಸಿದರು.ಇನ್ನು ಉಪ ಮುಖ್ಯಮಂತ್ರಿಯಾಗಿ ಆರ್ ಜೆ ಡಿ ಯ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿರುವ ಜೆಡಿಯು ಪಕ್ಷ ಆರ್ ಜೆಡಿ, ಕಾಂಗ್ರೆಸ್ ಸೇರಿದಂತೆ 7 ಪಕ್ಷಗಳು ಮತ್ತು ಒಬ್ಬ ಪಕ್ಷೇತರ ಶಾಸಕ ಸೇರಿ 164 ಶಾಸಕರ ಬೆಂಬಲದೊಂದಿಗೆ ಮಹಾಘಟಬಂಧನ ಸರ್ಕಾರ ರಚನೆಯಾಗಿದೆ.
PublicNext
10/08/2022 03:25 pm