ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತು ಹೆಚ್ಚು ಚರ್ಚೆಯಾಗುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಚರ್ಚೆಗೆ ತೆರೆ ಎಳೆದಿದ್ದಾರೆ.ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಹುರುಳಿಲ್ಲ ಅಂತಹ ಯಾವುದೇ ವಿಚಾರವೂ ಬಿಜೆಪಿಯಲ್ಲಿ ನಡೆದಿಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ,ಕುಟುಂಬ ಸಮೇತ ರಾಯರ ದರ್ಶನ ಪಡೆದು ನಾಳೆ ವಾಪಸ್ ಆಗುತ್ತಿದ್ದೇವೆ. ಬಳಿಕ ರಾಜ್ಯ ಪ್ರವಾಸದ ಸಿದ್ಧತೆ ಆರಂಭಿಸುವುದಾಗಿ ತಿಳಿಸಿದರು.
ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಾಯಕರ ಟ್ವೀಟ್ ಹಾಗೂ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ಅದರಲ್ಲಿ ಯಾವುದೇ ಗೊಂದಲಗಳೂ ಇಲ್ಲ. ರಾಜ್ಯ ಬಿಜೆಪಿಯಲ್ಲಾಗಲಿ ಹೈಕಮಾಂಡ್ ಮಟ್ಟದಲ್ಲಾಗಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚಿಂತನೆ ನಡೆದಿಲ್ಲ. ಸಿಎಂ ಬದಲಾವಣೆ ಎಂಬ ಚರ್ಚೆ ಕೇವಲ ವದಂತಿಯಷ್ಟೇ ಎಂದರು.
PublicNext
10/08/2022 05:20 pm