ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ಗಿಮಿಕ್: ಸಚಿವ ಕಾರಜೋಳ

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಉತ್ತ‌ಮ ಆಡಳಿತ ನೀಡುವುದನ್ನು ಅರಗಿಸಿಕೊಳ್ಳದ ಕಾಂಗ್ರೆಸ್, ಮುಖ್ಯಮಂತ್ರಿ ಬದಲಾವಣೆ ಚರ್ಚೆ ಎಬ್ಬಿಸಿದ್ದು ಅಪ್ರಸ್ತುತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ನವರಿಗೆ ಬುದ್ದಿ ಭ್ರಮಣೆಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ‌ ಉತ್ತಮ ಆಡಳಿತ, ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಒತ್ತು ನೀಡುತ್ತಿದ್ದಾರೆ. ದಕ್ಷತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಗೆ ಅರಿಗಿಸಿಕೊಳ್ಳಲು ಆಗುತ್ತಿಲ್ಲ. ಸುಳ್ಳು ಹೇಳುವುದು ಕಾಂಗ್ರೆಸ್ ಗೆ ಕಾಮನ್ ಆಗಿದೆ‌ ಎಂದು ಹರಿಹಾಯ್ದರು.

ಇನ್ನು 40% ಸರಕಾರ ಎಂದು ಆರೋಪಿಸುತ್ತಿದ್ದಾರೆ‌. ಅಂಥದ್ದು ಒಂದು ಕೇಸ್ ಇದ್ದರೆ ದಾಖಲೆ ಕೊಡಿ ಎಂದರೂ ಮಾಡಲಿಲ್ಲ. ನಾವು ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ವಿರುದ್ದ ಹರಿಹಾಯ್ದರು.

Edited By :
PublicNext

PublicNext

10/08/2022 06:55 pm

Cinque Terre

44.29 K

Cinque Terre

0

ಸಂಬಂಧಿತ ಸುದ್ದಿ