ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಅಭ್ಯರ್ಥಿ ಜಗದೀಪ್ ಧನಕರ್ ಭಾರತದ ಉಪರಾಷ್ಟ್ರಪತಿಯಾಗಿ ಇಂದು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಭಾರತದ ಚುನಾಯಿತ ನೂತನ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪ್ರಮಾಣ ವಚನ ಬೋಧಿಸಲಿದರು.
ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಮಾರ್ಗರೇಟ್ ಆಳ್ವ ಅವರನ್ನು ಸೋಲಿಸುವ ಮೂಲಕ ಜಗದೀಪ್ ಧನಕರ್ ಆಗಸ್ಟ್ 6 ರಂದು ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. ಮಾರ್ಗರೇಟ್ ಆಳ್ವ 182 ಮತಗಳನ್ನು ಪಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ 528 ಮತಗಳನ್ನು ಪಡೆದು ನಿರಾಯಾಸವಾಗಿ ಗೆಲುವು ಸಾಧಿಸಿದರು.
PublicNext
11/08/2022 04:26 pm