ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಂಚ-ಮಂಚ ಹೇಳಿಕೆ ಕೊಟ್ಟ ಪ್ರಿಯಾಂಕ್ ಖರ್ಗೆ ಬಂಧನಕ್ಕೆ ಬಿಎಸ್‌ವೈ ಆಗ್ರಹ

ಶಿವಮೊಗ್ಗ: ರಾಜ್ಯದಲ್ಲಿ ಸರ್ಕಾರಿ ನೌಕರಿ ಬೇಕಾದರೆ ಯುವತಿಯರು ಮಂಚವೇರಬೇಕು, ಯುವಕರು ಲಂಚ ಕೊಡಬೇಕು ಅಂತ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಬಗ್ಗೆ ಅವರು ಕ್ಷಮೆ ಕೂಡ ಕೇಳಿದ್ದಾರೆ. ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು, ಪ್ರಿಯಾಂಕ್ ಖರ್ಗೆ ಬಂಧನಕ್ಕೆ ಆಗ್ರಹಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಪ್ರಿಯಾಂಕ್ ಖರ್ಗೆ ಹೇಳಿಕೆ ಮೂರ್ಖತನದ ಪರಮಾವಧಿ. ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಹೆಣ್ಣು ಮಕ್ಕಳಿಗೆ ಅವಮಾನ ಮಾಡಿದ್ದಾರೆ. ಇದು ಕ್ಷಮಿಸಲಾಗದ ಅಕ್ಷಮ್ಯ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ರೀತಿಯ ಉದ್ಧಟತನ ನಡವಳಿಕೆಯನ್ನು ಜನರು ಖಂಡಿಸಬೇಕು. ಕೂಡಲೇ ಪ್ರಿಯಾಂಕ್ ಖರ್ಗೆ ಅವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ.

ಆಗಸ್ಟ್ 12ರ ಶುಕ್ರವಾರ ಕಲಬುರಗಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ್ದ ಪ್ರಿಯಾಂಕ್ ಖರ್ಗೆ ಲಂಚ ಮಂಚದ ಹೇಳಿಕೆ ನೀಡಿದ್ದರು. ಹೀಗಾಗಿ ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ಮೇಲೆ ಮುಗಿಬಿದ್ದಿದ್ದರು.

Edited By : Vijay Kumar
PublicNext

PublicNext

14/08/2022 02:25 pm

Cinque Terre

49.92 K

Cinque Terre

23

ಸಂಬಂಧಿತ ಸುದ್ದಿ