ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ನೆಹರು ಫೋಟೋ ಮಿಸ್ಸಿಂಗ್: ರಣದೀಪ್ ಸಿಂಗ್ ಸುರ್ಜೆವಾಲಾ ಕಿಡಿ

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಗೆ ಸಜ್ಜಾಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಾಧ್ಯಮಗಳಿಗೆ ನೀಡಿರುವ ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಹೆಸರು ಕೈಬಿಟ್ಟಿರುವುದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿವ ರಣದೀಪ್ ಸಿಂಗ್ ಸುರ್ಜೆವಾಲಾ ಕಿಡಿಕಾರಿದ್ದಾರೆ.

ಭಾರತದ ಮೊದಲ ಪ್ರಧಾನಿ ಮತ್ತು ರಾಷ್ಟ್ರ ನಿರ್ಮಾತೃ ಪಂಡಿತ್ ಜವಾಹರಲಾಲ್ ನೆಹರು ಅವರ ಮೇಲಿನ ಕೊನೆಯಿಲ್ಲದ ದ್ವೇಷವು ಅದರ ಉತ್ತುಂಗವನ್ನು ತಲುಪಿದೆ. ಸಿಎಂ ಬೊಮ್ಮಾಯಿ ಸರ್ಕಾರವು ತನ್ನ ಅಸ್ತಿತ್ವವನ್ನೇ ನಿರಾಕರಿಸುವ ಮೂಲಕ ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ. ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದಂದು ಇದು ಇಂದಿನ ಆಡಳಿತಗಾರರ ಪಾತ್ರ ಮತ್ತು ಕೆಟ್ಟ ಆಲೋಚನೆ ಪ್ರಕ್ರಿಯೆಯನ್ನು ಪ್ರತಿಬಿಂಬಿಸುತ್ತದೆ ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮೂಲಕ‌ ಆಕ್ರೋಶ ಹೊರಹಾಕಿದ್ದಾರೆ.

Edited By : Vijay Kumar
PublicNext

PublicNext

14/08/2022 05:27 pm

Cinque Terre

124.61 K

Cinque Terre

15

ಸಂಬಂಧಿತ ಸುದ್ದಿ