ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

LIVE: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ ಆರಂಭ

ದೇಶದೆಲ್ಲೆಡೆ 75ನೇ ಸ್ವಾತಂತ್ರ್ಯ ಹಬ್ಬದ ವಾತಾವರಣ ಮನೆ ಮಾಡಿದೆ. ಮನೆ ಮನೆಯಲ್ಲೂ ಧ್ವಜಗಳು ಹಾರಾಡತೊಡಗಿದೆ. ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರೋಡೋ ಕ್ಷಣಕ್ಕೆ ಇಡೀ ದೇಶವೇ ಕಾಯುತ್ತಿದೆ.

ಇನ್ನು ಕೆಂಪುಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಏಳು ಸಾವಿರ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಕೇಂದ್ರಿಯ ಮೀಸಲು ಪಡೆ ಒಳಗೊಂಡಂತೆ ಹತ್ತು ಸಾವಿರ ಪೊಲೀಸ್ ಸಿಬ್ಬಂದಿಯಿಂದ ಭದ್ರತೆ ಕೈಗೊಳ್ಳಲಾಗಿದೆ. FRS (Facial recognition system) ತಂತ್ರಜ್ಞಾನ ಹೊಂದಿರುವ ಸಿಸಿಟಿವಿ ಅಳವಡಿಸಲಾಗಿದೆ. ಮೇಲುಸ್ತುವಾರಿಗಾಗಿ ವಿಶೇಷ ಟೀಂ ರಚನೆ ಮಾಡಲಾಗಿದ್ದು ಅನುಮಾನಸ್ಪದ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಡ್ರೋನ್, ಗಾಳಿಪಟ ಹಾರಾಟ ನಿಷೇಧ, ಅನುಮಾನಾಸ್ಪದ ಡ್ರೋನ್ ತಡೆಯಲು ಡಿಆರ್‌ಡಿಓ ರೂಪಿಸಿರುವ ಆಂಟಿ ಡ್ರೋನ್ ಸಿಸ್ಟಮ್ ಅಳವಡಿಸಲಾಗಿದೆ.

ಆಜಾದಿ ಕಾ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ಇಂದು (ಆಗಸ್ಟ್ 15) ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಕೋಟೆಯಲ್ಲಿ ರಾಷ್ಟ್ರಧ್ವಜ ಆರೋಹಣ ಮಾಡಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಿರುವುದು ಇದು 9ನೇ ಬಾರಿ. ಈ ಬಾರಿ ಭಾರತ 75ನೇ ವರ್ಷದ ಸ್ವಾತಂತ್ರ್ಯವನ್ನು ಆಚರಿಸುತ್ತಿದ್ದು ಇದು ಹೆಚ್ಚಿನ ಮಹತ್ವ ಹೊಂದಿದೆ.

Edited By : Vijay Kumar
PublicNext

PublicNext

15/08/2022 07:12 am

Cinque Terre

59.94 K

Cinque Terre

3

ಸಂಬಂಧಿತ ಸುದ್ದಿ