ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ಸತತ ಒಂಬತ್ತನೇ ಬಾರಿಗೆ ರಾಷ್ಟ್ರಧ್ವಜಾರೋಹಣ ಮಾಡಿದರು.
ಇನ್ನು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ಮೇಲೆ ಅತಿ ಹೆಚ್ಚು ಬಾರಿ ಧ್ವಜಾರೋಹನ ಮಾಡಿದ ಪ್ರಧಾನಿರಾಗಿದ್ದಾರೆ. ಅವರು 17 ಬಾರಿ ಧ್ವಜಾರೋಹನ ಮಾಡಿದ್ದಾರೆ. ಉಳಿದಂತೆ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ (16) ಮತ್ತು ಮನಮೋಹನ್ ಸಿಂಗ್ (10) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಪ್ರಧಾನಿ ಮೋದಿ ಇದ್ದಾರೆ.
PublicNext
15/08/2022 09:36 am