ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೈಗಾರಿಕಾ ಕಾರಿಡಾರ್ ಗೆ ವಿರೋಧ: ರೈತರೊಂದಿಗೆ ಸಭೆ ನಡೆಸಿ ಚರ್ಚಿಸುವೆ ಎಂದ ಬೈರತಿ

ದಾವಣಗೆರೆ: ಕೈಗಾರಿಕಾ ಕಾರಿಡಾರ್ ಮಾಡುವುದು ಸೂಕ್ತ ಎಂಬುದು ನನ್ನ ಭಾವನೆ. ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕಾದರೆ ಹಲವಾರು ಕೈಗಾರಿಕೆಗಳು ಬಂದರೆ ಒಳ್ಳೆಯದು. ಮೆಳ್ಳಿಕಟ್ಟೆ ಸೇರಿದಂತೆ ವಿವಿಧ ಗ್ರಾಮಗಳ ರೈತರು ವಿರೋಧ ಮಾಡುತ್ತಿರುವ ಕುರಿತು ಗಮನಕ್ಕೆ ಬಂದಿದೆ. ರೈತರ ಜೊತೆ ಈ ಬಗ್ಗೆ ಮುಂದಿನ ತಿಂಗಳು ಸಭೆ ನಡೆಸಿ ಚರ್ಚೆ ನಡೆಸಲಾಗುವುದು. ನೀರಾವರಿ ಪ್ರದೇಶ ಸ್ವಾಧೀನ ಪಡಿಸಿಕೊಳ್ಳುವ ಚಿಂತನೆ ಇಲ್ಲ. ಸೂಕ್ತ ಸ್ಥಳದ ಬಗ್ಗೆಯೂ ಸಮಾಲೋಚನೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೈಗಾರಿಕಾ ಕಾರಿಡಾರ್ ಗಾಗಿ ರೈತರಿಂದ ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳುವುದಿಲ್ಲ. ಈ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ದಾವಣಗೆರೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಕುರಿತಂತೆ ಕೇಂದ್ರದ ಸಂಬಂಧಪಟ್ಟ ಇಲಾಖೆಗೆ ವರದಿ ಕಳುಹಿಸಲಾಗಿದೆ. ಅಲ್ಲಿಂದ ಬರುವ ಉತ್ತರಕ್ಕೆ ಕಾಯುತ್ತಿರುವುದಾಗಿ ತಿಳಿಸಿದರು.

ಮಳೆಯಿಂದ ಬೆಳೆ ಹಾಗೂ ಮನೆ ಹಾನಿಗೀಡಾದವರಿಗೆ ಪರಿಹಾರ ನೀಡುವ ವಿಚಾರದಲ್ಲಿ ಜಿಲ್ಲಾಡಳಿತವು ಅನ್ಯಾಯ ಆಗುವಂಥ ಕೆಲಸ ಮಾಡಲ್ಲ. 4200 ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಹಾನಿ ಆಗಿದ್ದು, ಪರಿಹಾರ ನೀಡುವ ಕೆಲಸ ಮಾಡಲಾಗಿದೆ. ಸೂಕ್ತ ದಾಖಲಾತಿಗಳಿದ್ದರೆ ಜಿಲ್ಲಾಧಿಕಾರಿ ಹಾಗೂ ಸಿಇಒ ಅವರ ಗಮನಕ್ಕೆ ತನ್ನಿ. ಪರಿಹಾರ ದೊರಕಿಸಿಕೊಡಲು ಕ್ರಮ ಕೈಗೊಳ್ಳುತ್ತಾರೆ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದಾಗಿ ಹಾನಿಯಾಗಿರುವ ಕುರಿತಂತೆ ಸರ್ವೇ ನಡೆಸಲಾಗುತ್ತಿದೆ. ಚಾಚೂ ತಪ್ಪದೇ ಸಂತ್ರಸ್ತರ ಮನೆ ಬಾಗಿಲಿಗೆ ಪರಿಹಾರ ದೊರಕಿಸಿಕೊಡಲು ಕ್ರಮ ವಹಿಸಲಾಗುವುದು ಎಂದರು.

Edited By : Nagesh Gaonkar
PublicNext

PublicNext

15/08/2022 06:49 pm

Cinque Terre

41.35 K

Cinque Terre

0