ವರದಿ: ಸಂತೋಷ ಬಡಕಂಬಿ.
ಅಥಣಿ: ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರ ಅನುಪಸ್ಥಿತಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಸಿಸಿ ಪಾಟೀಲ ಮತ್ತೆ ಹೊಸದೊಂದು ಚರ್ಚೆಗೆ ಕಾರಣರಾಗಿದ್ದಾರೆ.
ಇಂದು ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಸಚಿವರು ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಸುಮಾರು 35 ಕೋಟಿ ರೂ. ವೆಚ್ಚದ ಕೊಟ್ಟಲಗಿ- ನಿಪ್ಪಾಣಿ ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿದರು.
ಲೋಕೊಪಯೋಗಿ ಇಲಾಖೆಯ ಸರಕಾರಿ ಕಾರ್ಯಕ್ರಮದಲ್ಲಿ ಲಕ್ಷಣ ಸವದಿ, ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಸಾಬ ಜೊಲ್ಲೆ ಸೇರಿದಂತೆ ಇತರರು ಉಪಸ್ಥಿತರಿದ್ರು. ಆದರೆ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಅವರು ಗೈರಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಕಳೆದ ತಿಂಗಳು ಸಚಿವ ಮಾಧುಸ್ವಾಮಿ ಅವರ ಕಾರ್ಯಕ್ರಮದಲ್ಲಿಯೂ ಕೂಡ ಅಥಣಿ ಶಾಸಕರು ಗೈರಾಗಿದ್ದರು. ಕಳೆದು ಒಂದು ತಿಂಗಳಿನಲ್ಲಿ ಎರಡು ಬೃಹತ್ ಕಾಮಗಾರಿ ಕಾರ್ಯಕ್ರಮದಲ್ಲಿ ಶಾಸಕರು ಗೈರಾಗಿದ್ದರಿಂದ ಅಥಣಿ ಬಿಜೆಪಿ ವಲಯದಲ್ಲಿ ಮೂಲ ಬಿಜೆಪಿ, ವಲಸೆ ಬಿಜೆಪಿ ಎಂಬ ಬಗ್ಗೆ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.
PublicNext
16/08/2022 02:04 pm