ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯಪಾಲರ ಔತಣಕೂಟಕ್ಕೆ ತೆಲಂಗಾಣ ಸಿಎಂ ಕೆಸಿಆರ್‌ ಗೈರು‌

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಆಯೋಜಿಸಿದ್ದ 'ಅಟ್ ಹೋಮ್' (ಔತಣಕೂಟ) ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

ಶಿಷ್ಟಾಚಾರದಂತೆ 'ಅಟ್ ಹೋಮ್' ಕಾರ್ಯಕ್ರಮಕ್ಕೆ ಕೆಸಿಆರ್ ಅವರಿಗೆ ಆಹ್ವಾನಿಸಲಾಗಿತ್ತು.‌ ಆದರೆ ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ. ಇದರೊಂದಿಗೆ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲ ನಡುವಿನ ಭಿನ್ನಾಭಿಪ್ರಾಯ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕಳೆದ ವರ್ಷವೂ ರಾಜ್ಯಪಾಲರು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕೆಸಿಆರ್ ಗೈರಾಗಿದ್ದರು. ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ನಡುವಿನ ಸಂಬಂಧ ಸೌಹಾರ್ದಯುತವಾಗಿಲ್ಲ. ಹಾಗಾಗಿ ರಾಜ್ಯ ಸರ್ಕಾರವು ಶಿಷ್ಟಾಚಾರವನ್ನು ಪಾಲಿಸುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

Edited By : Vijay Kumar
PublicNext

PublicNext

16/08/2022 02:42 pm

Cinque Terre

51.02 K

Cinque Terre

3

ಸಂಬಂಧಿತ ಸುದ್ದಿ