ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ಸಂಸದೀಯ ಮಂಡಳಿಗೆ ಬಿಎಸ್‌ವೈ ಆಯ್ಕೆ: ಪಬ್ಲಿಕ್ ನೆಕ್ಸ್ಟ್ ಮೂಲಕ ಅಭಿನಂದಿಸಿದ ಸಿಎಂ

ಬೆಂಗಳೂರು: ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿಗೆ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಸಂಗತಿಯನ್ನು ಪಬ್ಲಿಕ್ ನೆಕ್ಸ್ಟ್‌ನಲ್ಲಿ ಹಂಚಿಕೊಂಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಬಿಎಸ್‌ವೈ ಅವರನ್ನು ಅಭಿನಂದಿಸಿದ್ದಾರೆ.

'ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ.ಎಸ್ ಯಡಿಯೂರಪ್ಪ ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯರಾಗಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ‌. ಪಕ್ಷದ ಅತ್ಯಂತ ಉನ್ನತವಾದ ಸಂಸದೀಯ ಮಂಡಳಿಗೆ ತಮ್ಮನ್ನು ನೇಮಕ ಮಾಡುವುದರ ಮೂಲಕ ಪಕ್ಷ ತಮಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ' ಎಂದು ಪಬ್ಲಿಕ್ ನೆಕ್ಸ್ಟ್‌ನಲ್ಲಿ ಬರೆದುಕೊಂಡಿರುವ ಸಿಎಂ ಬೊಮ್ಮಾಯಿ ಯಡಿಯೂರಪ್ಪ ಅವರಿಗೆ ಶುಭಾಶಯ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

17/08/2022 05:06 pm

Cinque Terre

38 K

Cinque Terre

2

ಸಂಬಂಧಿತ ಸುದ್ದಿ