ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿಯಲ್ಲಿ ಸಿದ್ಧರಾಮಯ್ಯಗೆ ಕಪ್ಪು ಬಾವುಟದ ಸ್ವಾಗತ

ಮಡಿಕೇರಿ: ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಕೊಡಗು ಜಿಲ್ಲೆಯ ಹಲವು ಪ್ರದೇಶಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.‌ ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಕೊಡಗಿನ ಗಡಿ ಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾದ ನೂರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರ ಕೈಗೆ ನೀಡಿದರಲ್ಲದೇ ಕಪ್ಪುಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ಧರಾಮಯ್ಯ ಎಂದು ಘೋಷಣೆ ಕೂಗಿದರು.

ರಾಜ್ಯದಲ್ಲಿ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಸಿದ್ಧರಾಮಯ್ಯ ಕಾರಣರಾಗಿದ್ದಾರೆ. ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದೆ. ಜೊತೆಗೆ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿರುವ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡಬಾರದೆಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ತೀವ್ರ ಆಕ್ರೋಶ ವ್ಯಕ್ತ ಪಡಿಸಿದೆ.

Edited By : Nagesh Gaonkar
PublicNext

PublicNext

18/08/2022 03:56 pm

Cinque Terre

143.55 K

Cinque Terre

13

ಸಂಬಂಧಿತ ಸುದ್ದಿ