ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದು ಕಾರಿಗೆ ಮೊಟ್ಟೆ ಎಸೆದ ಕಾರ್ಯಕರ್ತರು : ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ

ಕೊಡಗು: ವ್ಯಾಪಕ ಮಳೆಯಿಂದಾಗಿ ಬೆಳೆಹಾನಿಯ ಪ್ರದೇಶದ ವೀಕ್ಷಣೆಗೆ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿಗೆ ಮೊಟ್ಟೆ ಎಸೆಯಲಾಗಿದೆ. ಹೌದು ಮಡಿಕೇರಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರಿಗೆ ಪ್ರತಿಭಟನೆಯ ಬಿಸಿ ತಾಗಿದೆ. ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗ್ಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಘೇರಾವ್ ಹಾಕಿದ್ದರು. ಇದೀಗ ಸಿದ್ದರಾಮಯ್ಯರ ಕಾರಿನತ್ತ ಮೊಟ್ಟೆ ಎಸೆಯಲಾಗಿತ್ತು. ಆದರೆ ಮೊಟ್ಟೆ ಸಿದ್ದರಾಮಯ್ಯರಿದ್ದ ಕಾರಿಗೆ ಬೀಳಲಿಲ್ಲ.ಇನ್ನು ಇದೇ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದಗಳು ನಡೆದಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Edited By : Nirmala Aralikatti
PublicNext

PublicNext

18/08/2022 07:25 pm

Cinque Terre

78.64 K

Cinque Terre

0

ಸಂಬಂಧಿತ ಸುದ್ದಿ