ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ
ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರಿ ಪ್ರತಿಭಟನೆ ಶುರುವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕೈ ಕಾರ್ಯಕರ್ತರು ಹರಿಹಾಯ್ಯುತ್ತಿದ್ದಾರೆ. ಇದರ ನಡುವೆಯೇ ಮೊಟ್ಟೆಗೆ ಮೊಟ್ಟೆಯಿಂದಲೇ ಉತ್ತರ ನೀಡುವುದಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿದ್ದಾರೆ.
ಫೇಸ್ ಬುಕ್ ಲೈವ್ ಗೆ ಬಂದಿರುವ ಹ್ಯಾರಿಸ್ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ, ಬಿಜೆಪಿಯವರು ಕೀಳುಮಟ್ಟದ ರಾಜಕೀಯ ಮಾಡುತ್ತಿರುವುದಾಗಿ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಪಕ್ಷವು ಎಂದಿಗೂ ಗಾಂಧಿ ತತ್ವ ಹಾಗೂ ಆದರ್ಶಗಳನ್ನು ಮೈಗೂಡಿಸಿಕೊಂಡು ಬಂದಿದೆ. ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ತೋರಿಸಿ ಎಂದು ಗಾಂಧೀಜಿ ಹೇಳಿದ್ದರು. ಅದರಂತೆ ರಾಜ್ಯ ಯುವ ಕಾಂಗ್ರೆಸ್ ಸಮಿತಿಯು ರಾಜ್ಯದ ಎಲ್ಲಾ ಸಚಿವರಿಗೆ ಮೊಟ್ಟೆ ನೀಡಲು ನಿರ್ಧರಿಸಿದ್ದೇವೆ. ಬಿಜೆಪಿಯವರು ನಮ್ಮ ಮೇಲೆ ಮೊಟ್ಟೆ ಎಸೆದು ಮುಜುಗರ ಉಂಟು ಮಾಡಲು ಯತ್ನಿಸಿರಬಹುದು ಆದರೆ ನಾವು ಗಾಂಧೀಜಿಯ ಆಹಿಂಸಾ ತತ್ವವನ್ನು ಪಾಲಿಸಲಿದ್ದೇವೆ. ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದು ಯಾವುದೇ ಕಾರಣಕ್ಕೂ ನಾವು ತಲೆಬಾಗುವುದಿಲ್ಲ ಎಂದಿದ್ದಾರೆ.
PublicNext
20/08/2022 11:36 am