ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ವೀರ ಸಾವರ್ಕರ್ ಗೆ ಅಪಮಾನ ಮಾಡಿದರೆ ಸಹಿಸಲ್ಲ: ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ: ವೀರ ಸಾವರ್ಕರ್ ಗೆ ಕಾಂಗ್ರೆಸ್ ಅಪಮಾನ ಮಾಡಿದೆ. ರಾಜ್ಯದಲ್ಲಿರುವುದು ನಕಲಿ ಕಾಂಗ್ರೆಸ್. ಅಲ್ಪಸಂಖ್ಯಾತರ ಮತಕ್ಕಾಗಿ ರಾಜಕೀಯ ಮಾಡುತ್ತಿದೆ ಎಂದು ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.

ಹೊನ್ನಾಳಿ ಪಟ್ಟಣದ ತಮ್ಮ ನಿವಾಸದ ಮುಂದೆ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಗೆ ಅಪಮಾನ ಮಾಡಿದರೆ ಸಹಿಸಲು ಆಗದು. ನನ್ನ ಮನೆ ಎದುರು ಸಾವರ್ಕರ್ ಕಟೌಟ್ ಹಾಕಿದ್ದೇನೆ. ಪ್ರತಿಯೊಬ್ಬ ಹಿಂದೂ ತನ್ನ ಮನೆಯ ಮುಂದೆ ಸಾವರ್ಕರ್ ಕಟೌಟ್, ಬ್ಯಾನರ್ ಹಾಕಿ. ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಇದರಿಂದ ಹತಾಶರಾಗಿರುವ ಕಾಂಗ್ರೆಸ್ ನವರು ಸಮಾಜದಲ್ಲಿ ಗೊಂದಲ ಉಂಟು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ದೇಶದ್ರೋಹಿಗಳು ಅಟ್ಟಹಾಸದಿಂದ ಮೆರೆಯುತ್ತಿದ್ದಾರೆ. ಪಿಎಫ್ಐ, ಎಸ್ ಡಿ ಪಿಐ ಸಂಘಟನೆಗಳು ರಾಜ್ಯದಲ್ಲಿ ಅರಾಜಕತೆ ಉಂಟು ಮಾಡುತ್ತಿವೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರ ಮೇಲಿದ್ದ ಕೇಸ್ ಗಳನ್ನು ವಾಪಸ್ ಪಡೆದಿದ್ದರು. ಕೇವಲ ಮತಕ್ಕಾಗಿ ಈ ಕೆಲಸ ಮಾಡಿದ್ದರು. ಕಾಂಗ್ರೆಸ್ ನಲ್ಲಿ ಈಗ ಒಳಗುಂಪಿದೆ. ಸಿದ್ದರಾಮಯ್ಯರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. ಕೆ. ಶಿವಕುಮಾರ್, ಪ್ರಿಯಾಂಕ್ ಖರ್ಗೆ, ಎಂ. ಬಿ. ಪಾಟೀಲ್ ಸೇರಿದಂತೆ ಹಿರಿಯ ನಾಯಕರು ಬೆಂಬಲಕ್ಕೆ ಬರಲಿಲ್ಲ. ಇದನ್ನು ನೋಡಿದರೆ ಅವರಲ್ಲಿ ಜಗಳವಿರುವುದು ಗೊತ್ತಾಗುತ್ತದೆ ಎಂದು ಟೀಕಾಪ್ರಹಾರ ನಡೆಸಿದರು.

Edited By : Nagesh Gaonkar
PublicNext

PublicNext

20/08/2022 05:48 pm

Cinque Terre

41.13 K

Cinque Terre

2

ಸಂಬಂಧಿತ ಸುದ್ದಿ