ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೊಡಗಿನಲ್ಲಿ ಮೊಟ್ಟೆ ಎಸೆದ ವ್ಯಕ್ತಿಯ ಕಾಂಗ್ರೆಸ್ ಕಾರ್ಯಕರ್ತ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಆ ವ್ಯಕ್ತಿ ಗಣ ವೇಷಧಾರಿಯಾಗಿರುವ ಫೋಟೋವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.
ಫೋಟೋ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಮತ್ತು RSS ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ, ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ. RSS ‘ಪ್ಯಾಂಟು’ ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಬಿಜೆಪಿಗೆ ಟಾಂಗ್ ಕೊಟ್ಟಿದೆ.
ಇನ್ನು ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿದ್ದಂತ ಸಂಪತ್ ಅವರ ಆರ್ ಎಸ್ ಎಸ್ ಧಿರಿಸಿನ ಫೋಟೋ ಟ್ವೀಟ್ ಮಾಡಿರುವಂತ ಕಾಂಗ್ರೆಸ್, ಬಿಜೆಪಿ ಹೇಳುವ ಸುಳ್ಳುಗಳಿಗೆ ‘ಸತ್ಯ’ವೇ ಕಂಗೆಟ್ಟು ದೇಶ ಬಿಟ್ಟು ಓಡಿ ಹೋಗಲಿದೆ! ಕಾರಿಗೆ ಮೊಟ್ಟೆ ಎಸೆದವರು ಕಾಂಗ್ರೆಸ್‌ನವರು ಎಂಬ ಕಟ್ಟುಕತೆ ಸೃಷ್ಟಿಸುವ ಮುನ್ನ ಉತ್ತರಿಸಿ. ಈ ವ್ಯಕ್ತಿಯೊಂದಿಗೆ ಅಪ್ಪಚ್ಚು ರಂಜನ್ ಅವರಿಗೆ ಏನು ಕೆಲಸ? ಸ್ಥಳೀಯ ಕಾಂಗ್ರೆಸ್ ಮುಖಂಡರಿಗೇ ಪರಿಚಯವಿಲ್ಲದ ಆತ ಕಾಂಗ್ರೆಸ್ ಕಾರ್ಯಕರ್ತನಾಗುವುದು ಹೇಗೆ? ಎಂದು ಪ್ರಶ್ನಿಸಿದೆ.
PublicNext
21/08/2022 07:37 am