ಬೆಂಗಳೂರು: ಮೊಟ್ಟೆ ಎಸೆತ ಪ್ರಕರಣದ ಬೆನ್ನಲ್ಲೇ ರಾಜ್ಯ ಸರಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಜೆಡ್ ಶ್ರೇಣಿಯ ಭದ್ರತೆ ನೀಡಿದೆ.
ಕೊಡಗಿನಲ್ಲಿ ಮೊಟ್ಟೆ ಎಸೆತ ಪ್ರಕರಣದ ಬಗ್ಗೆ ವ್ಯಾಪಾಕ ಆಕ್ರೋಶ ಕೇಳಿ ಬಂದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಭದ್ರತೆ ಹೆಚ್ಚಿಸಲಾಗಿದ್ದು, ಇದೀಗ ಜೆಡ್ ಭದ್ರತೆ ನೀಡಲು ರಾಜ್ಯ ಸರಕಾರ ಆದೇಶಿಸಿದೆ. ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳು, ಸಿಬ್ಬಂದಿ ಸೇರಿ 21 ಮಂದಿಯನ್ನು ನಿಯೋಜನೆ ಮಾಡಲಾಗಿದೆ. ಮೂರು ಪಾಳಿಯಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸಬೇಕು. ಎಲ್ಲೇ ಹೋದರೂ ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಬೆಂಗಳೂರಿನಿಂದ ಹೊರ ಹೋಗುವ ವೇಳೆ ಹೈವೇ ಪ್ಯಾಟ್ರೋಲಿಂಗ್, ಸ್ಥಳೀಯ ಪೊಲೀಸರು ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕು ರಾಜ್ಯ ಗೃಹ ಇಲಾಖೆ ಸೂಚಿಸಿದೆ. ಸಿದ್ದರಾಮಯ್ಯ ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಮತ್ತು ಕುಮಾರಸ್ವಾಮಿಗೆ ಕೂಡ ಝಡ್ ಶ್ರೇಣಿಯ ಭದ್ರತೆ ನೀಡಲಾಗಿದೆ. ಜಿಲ್ಲಾ ಪ್ರವಾಸದ ವೇಳೆ ಸಂದರ್ಭಾನುಸಾರ ಸಿಬ್ಬಂದಿ ಹೆಚ್ಚಿಸಲು ಎಲ್ಲ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.
PublicNext
22/08/2022 11:00 pm