ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಬ್ಲಿಕ್ ನೆಕ್ಸ್ಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಈ ದುರ್ಘಟನೆಯಲ್ಲಿ ನಾಲ್ಕು ಜನ ಪುರುಷರು, ಮೂರು ಜನ ಮಹಿಳೆಯರು, ಇಬ್ಬರು ಮಕ್ಕಳು ಸೇರಿ ಒಟ್ಟು ಒಂಬತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
'ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
PublicNext
25/08/2022 10:44 am