ಬಿಲ್ಕಿನ್ ಬಾನೋ ಅತ್ಯಾಚಾರ ಪ್ರಕರಣದ ಸಂತ್ರಸ್ಥರಿಗೆ ನ್ಯಾಯ ಒದಗಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಬೇಟಿ ಬಚಾವೋ’ ಘೋಷಣೆಗಳನ್ನು ಕೂಗುವ ಬಿಜೆಪಿ, ಅತ್ಯಾಚಾರಿಗಳನ್ನು ರಕ್ಷಿಸುತ್ತಿದೆ. ದೇಶದಲ್ಲಿ ಮಹಿಳೆಯರಿಗೆ ಗೌರವ,ಹಕ್ಕುಗಳ ಕುರಿತ ಪ್ರಶ್ನೆ ಕಾಡುತ್ತಿದೆ. ಬಿಲ್ಕಿನ್ ಬಾನೋಗೆ ನ್ಯಾಯ ಒದಗಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.
ಕೆಲ ದಿನಗಳ ಹಿಂದೆ ಅತ್ಯಾಚಾರ ಪ್ರಕರಣ ಬರೋಬ್ಬರಿ 11 ಅಪರಾಧಿಗಳನ್ನು ಬಿಡುಗಡೆಗೊಳಿಸಲಾಗಿತ್ತು ಎಂದು ಉಲ್ಲೇಖಿಸಿದ್ದಾರೆ.
PublicNext
25/08/2022 10:08 pm