ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾನನಷ್ಟ ಕೇಸ್ ಹಾಕಲು ಮಾನ ಯಾರಿಗಿದೆ?: ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕೋಲಾರ ಉಸ್ತುವಾರಿ ಸಚಿವ ಮುನಿರತ್ನ ಮೇಲೆ ಮಾನನಷ್ಟ ಕೇಸ್ ಹಾಕೋದಾಗಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ 'ಮಾನನಷ್ಟ ಕೇಸ್ ಹಾಕಲು ಮಾನ ಯಾರಿಗಿದೆ?' ಎಂದು ಪ್ರಶ್ನಿಸಿದ್ದಾರೆ.

ನಗರದ ಜೆ ಪಿ ಭವನದಲ್ಲಿ ಮಾಧ್ಯಮಗಳಿಗೆ ಮಾತಾನಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಶಾಸಕರಾಗುವುದಕ್ಕೂ ಮೊದಲು ಇವರೇ ಗುತ್ತಿಗೆದಾರರು ಆಗಿದ್ರು. ಆ ಸಂದರ್ಭದಲ್ಲಿ ಒಂದು ಮಗು ಸತ್ತು ಹೋಯಿತು... ಆ ಕೆಲಸ ಮಾಡಿದ್ದು ಇವರೆ ಅಲ್ಲವೇ. ನರೇಂದ್ರ ಮೋದಿ ಇಂದ ಹಿಡಿದು ಯಾರಿಗೂ ಕಮಿಷನ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಕಾಂಗ್ರೆಸ್, ಬಿಜೆಪಿ ಯಾರು ಹೊರತಲ್ಲ ಎಂದು ಕಿಡಿಕಾರಿದರು.

ಈದ್ಗಾ ಮೈದಾನದ ವಿಚಾರದಲ್ಲಿ ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು. ಉಚ್ಚ ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಬೆಂಗಳೂರಿನ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡುತ್ತೇನೆ. ರಾಜ್ಯ ಸರ್ಕಾರಕ್ಕೆ ಆಗಾಗ ಇಂತಹ ಘಟನೆಗಳು ಆಗುವ ಮೂಲಕ ಅವರ ಹುಳುಕುಗಳನ್ನು ಮುಚ್ಚಿಕೊಳ್ಳಲು ಅನುಕೂಲ. ಇಂತ ವಿಚಾರಗಳನ್ನು ಸರ್ಕಾರ ಲಘುವಾಗಿ ತೆಗೆದುಕೊಳ್ಳಬಾರದು ಎಂದರು.

Edited By : Nagaraj Tulugeri
PublicNext

PublicNext

26/08/2022 11:05 am

Cinque Terre

38.41 K

Cinque Terre

7

ಸಂಬಂಧಿತ ಸುದ್ದಿ