ಮೈಸೂರು: ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ರಾಮೇಗೌಡ ಅವರು ಸಿದ್ದರಾಮಯ್ಯ ಅವರ ಕೊನೆಯ ಸಹೋದರ ಎಂದು ತಿಳಿದುಬಂದಿದೆ. ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿಯಾಗಿರುವ 64 ವರ್ಷದ ರಾಮೇಗೌಡ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ನಿಧನರಾಗಿದ್ದಾರೆ.
ರಾಮೇಗೌಡ ಅವರು ಪತ್ನಿ ರುಕ್ಮಿಣಮ್ಮ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಬಂಧುಗಳನ್ನು ಅಗಲಿದ್ದಾರೆ.
PublicNext
27/08/2022 07:29 am