ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

1 ವರ್ಷದ ಬಳಿಕ ಹೈಕಮಾಂಡ್ ನಾಯಕರನ್ನ ಭೇಟಿಯಾದ ಬಿಎಸ್‌ವೈ; ಒಗ್ಗಟ್ಟಿನ ಮಂತ್ರ ಬೋಧಿಸಿದ ಪ್ರಧಾನಿ ಮೋದಿ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಹೈಕಮಾಂಡ್ ನಾಯಕರಿಂದ ಅಂತರ ಕಾಯ್ದುಕೊಂಡಿದ್ದರು. ಅಷ್ಟೇ ಅಲ್ಲದೆ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿರಲಿಲ್ಲ. ಇದೀಗ ಹೈಕಮಾಂಡ್ ಅವರಿಗೆ ಎರಡು ಮಹತ್ವದ ಜವಾಬ್ದಾರಿ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಎಸ್‌ವೈ ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಅಭಿನಂದನೆ ಸಲ್ಲಿಸಲು ಶುಕ್ರವಾರ ದೆಹಲಿಗೆ ತೆರಳಿದ್ದಾರೆ.

ಬಿಜೆಪಿ ಕೇಂದ್ರಿಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಗೆ ಆಯ್ಕೆ ಆಗಿರುವ ಬಳಿಕ ಇದೀಗ ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಪಕ್ಷ ಸಂಘಟನೆ ಹಾಗೂ ರಾಜ್ಯ ಪ್ರವಾಸದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯಡಿಯೂರಪ್ಪ ಅವರಿಗೆ ಒಗ್ಗಟ್ಟಿನ ಮಂತ್ರ ಪಠಿಸುವಂತೆ ಸೂಚಿಸಿದ್ದಾರೆ.

ಪ್ರಧಾನಿ ಮೋದಿ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಎಸ್‌ ಯಡಿಯೂರಪ್ಪ, ಪ್ರಧಾನಿ ಜೊತೆ 20 ನಿಮೀಷಗಳ ಕಾಲ ಚರ್ಚೆ ಮಾಡಿದ್ದೇನೆ . 20 ನಿಮಿಷಗಳ ಕಾಲ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಿತು. ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಪ್ರಧಾನಿ ಮೋದಿ ಅವರು ಇದೇ 2ನೇ ತಾರೀಖಿನಂದು ಮಂಗಳೂರಿಗೆ ಬರುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಜನರು ಸೇರಿ ದೊಡ್ಡ ಕಾರ್ಯಕ್ರಮ ಮಾಡಲಿದ್ದೇವೆ ಎಂದರು.

ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಪ್ರವಾಸಮಾಡಲು ಅನುಮತಿ ಪಡೆಯುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷ ಸಂಘಟನೆಗೆ ರಾಜ್ಯ ಪ್ರವಾಸ ಕೈಗೊಳ್ಳಲು ಈಗ ಅನುಮತಿ ಪಡೆಯುವ ಪ್ರಶ್ನೆಯೆ ಉದ್ಬವ ಆಗುವುದಿಲ್ಲ. ಈಗಾಗಲೇ ಪ್ರವಾಸ ಮಾಡಲು ನಿರ್ಧಾರವಾಗಿದೆ. ನಾನು, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ನಾಯಕರು ರಾಜ್ಯ ಪ್ರವಾಸಮಾಡಲಿದ್ದೇವೆ ಎಂದು ಹೇಳಿದರು.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಕುರಿತು ಹೈಕೋರ್ಟಿನ ಆದೇಶ ಸ್ವಾಗತಾರ್ಹ. ಗಣಪತಿ ಹಬ್ಬ ಮಾಡುವುದು ಎಲ್ಲರನ್ನೂ ಒಗ್ಗೂಡಿಸುವ ಸಲುವಾಗಿ ಅನಗತ್ಯವಾಗಿ ಕೆಲವರು ಗೊಂದಲ ಮಾಡುತ್ತಿದ್ದಾರೆ. ಅದಕ್ಕೆ ಅರ್ಥ ಇಲ್ಲ. ಶಾಂತ ರೀತಿಯಲ್ಲಿ ಹಬ್ಬ ಆಚರಿಸಬೇಕು. ಆ ಜಾಗ ಈ ಜಾಗ ಅಂತ ಬಡಿದಾಡುವುದರಲ್ಲಿ ಅರ್ಥ ಇಲ್ಲ. ಹೈಕೋರ್ಟ್‌ ಒಳ್ಳೆಯ ತೀರ್ಮಾನ ತೆಗೆದುಕೊಂಡಿದೆ ಎಂದು ತಿಳಿಸಿದರು.

Edited By : Vijay Kumar
PublicNext

PublicNext

27/08/2022 04:10 pm

Cinque Terre

20.2 K

Cinque Terre

0

ಸಂಬಂಧಿತ ಸುದ್ದಿ