ನವದೆಹಲಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರ ಆಯ್ಕೆಗೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಅಕ್ಟೋಬರ್ 17ಕ್ಕೆ ಕಾಂಗ್ರೆಸ್ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆ ನಡೆದರೆ, ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ ಎಂದು ವರದಿಯಾಗಿದೆ. ಚುನಾವಣಾ ಪ್ರಕ್ರಿಯೆಯ ಅಧಿಸೂಚನೆಯನ್ನು ಸೆಪ್ಟೆಂಬರ್ 22ರಂದು ಬಿಡುಗಡೆ ಮಾಡಲಾಗುತ್ತದೆ. ಸೆಪ್ಟೆಂಬರ್ 24ರಂದು ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಸಪ್ಟೆಂಬರ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಲಿದೆ ಎಂದು ವರದಿಗಳು ತಿಳಿಸಿದೆ.
ಸದ್ಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸಭೆಗೆ ವರ್ಚುವಲ್ ಆಗಿ ಭಾಗವಹಿಸಿದ್ದಾರೆ. ಶುಕ್ರವಾರ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರ ದಿಢೀರ್ ರಾಜೀನಾಮೆ ಮತ್ತು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅವರು ಬರೆದ ಪತ್ರದ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ. ಆಜಾದ್ ತಮ್ಮ ಪತ್ರದಲ್ಲಿ ರಾಹುಲ್ ಗಾಂಧಿ ಅವರು "ಪಕ್ಷದ ಸಂಪೂರ್ಣ ಸಮಾಲೋಚನಾ ಕಾರ್ಯವಿಧಾನವನ್ನು ಕೆಡವಿದ್ದಾರೆ" ಎಂದು ಟೀಕಿಸಿದ್ದಾರೆ.
PublicNext
28/08/2022 05:37 pm