ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಹಾರ ಸಿಎಂ ನಿತೀಶ್‌ಕುಮಾರ್ ಭೇಟಿಯಾದ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್

ಪಾಟ್ನಾ: ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಅವರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಲು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಬುಧವಾರ ಪಾಟ್ನಾಕ್ಕೆ ಆಗಮಿಸಿದರು.

ಇದಕ್ಕೂ ಮೊದಲು ಪಾಟ್ನಾ ವಿಮಾನ ನಿಲ್ದಾಣದಲ್ಲಿ ನಿತೀಶ್ ಅವರನ್ನು ಬರಮಾಡಿಕೊಂಡರು. ಕೆಸಿಆರ್ ಅವರು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.2024 ರ ಲೋಕಸಭಾ ಚುನಾವಣೆಗೆ ಪ್ರತಿಪಕ್ಷಗಳ ಐಕ್ಯತೆಯ ಮೊದಲ ಹೆಜ್ಜೆಯಾಗಿ ನಾಯಕರು ಈ ಸಭೆಯನ್ನು ನಡೆಸುತ್ತಿದ್ದಾರೆ.ಈ ಸಂದರ್ಭದಲ್ಲಿ ಕೆಸಿಆರ್ ಇತ್ತೀಚೆಗೆ ರಾಜ್ಯದಲ್ಲಿ ನಡೆದ ಅಗ್ನಿ ದುರಂತದ 12 ಸಂತ್ರಸ್ತ ಕುಟುಂಬಸ್ಥರು ಹಾಗೂ ಗಾಲ್ವಾನ್​ ಕಣಿವೆಯ ಐವರು ಹುತಾತ್ಮ ಯೋಧರ ಕುಟುಂಬಗಳಿಗೆ ಪರಿಹಾರದ ಚೆಕ್​ಗಳನ್ನು ವಿತರಿಸಿದರು.

Edited By : Nagaraj Tulugeri
PublicNext

PublicNext

31/08/2022 07:44 pm

Cinque Terre

22.55 K

Cinque Terre

0

ಸಂಬಂಧಿತ ಸುದ್ದಿ