ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಯಮಕನಮರಡಿ ಬಿಟ್ಟರೆ ಸವದತ್ತಿ ಕ್ಷೇತ್ರದಿಂದ ಸ್ಪರ್ಧೆ ಮಾಡುವೆ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯಲ್ಲಿ 10 ರಿಂದ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸೀಟು ಗೆಲ್ಲಲು ಪ್ರಯತ್ನ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಇದರ ಜೊತೆ ಕಾಂಗ್ರೆಸ್ ಟಿಕೆಟ್ ಪಡೆಯಲು ಅಭ್ಯರ್ಥಿ ಆಯಾ ಕ್ಷೇತ್ರದಲ್ಲಿ ಜನಪ್ರಿಯತೆ, ಆಕರ್ಷಣೀಯ ವ್ಯಕ್ತಿತ್ವ ಹೊಂದಿರಬೇಕು. ಒಳ್ಳೆಯ ಕೆಲಸ ಮಾಡಿರಬೇಕು. ಎಲ್ಲಾ ಪಕ್ಷಗಳ ಟಿಕೆಟ್ ಅಂತಿಮವಾದ ಮೇಲೆ ಕೊನೆಯ ಸರ್ವೇ ಮಾಡಿ ನಮ್ಮ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ಎರಡು ಕ್ಷೇತ್ರಗಳಿಂದ ಸತೀಶ್‌ ಜಾರಕಿಹೊಳಿ ಸ್ಪರ್ಧಿಸಬೇಕು ಎಂಬ ಬೆಂಬಲಿಗರ ಒತ್ತಾಯದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಗೋಕಾಕ್ನ ಲ್ಲಿ ಉತ್ತರಿಸಿದ ಸತೀಶ ಜಾರಕಿಹೊಳಿ ಅವರು, ಆ ರೀತಿ ಇರಬಹುದು, ಆದರೆ ಅಂತಿಮವಾಗಿ ಒಂದೇ ಕಡೆ ಸ್ಪರ್ಧಿಸಬೇಕಾಗುತ್ತದೆ. ಎರಡು ಕಡೆ ಸ್ಪರ್ಧಿಸುವ ಅನಿವಾರ್ಯತೆ ಇಲ್ಲ. ಆಯಾ ಕ್ಷೇತ್ರಗಳಲ್ಲಿ ಸಾಕಷ್ಟು ಅಭ್ಯರ್ಥಿಗಳಿದ್ದಾರೆ. ಅಭ್ಯರ್ಥಿಗಳು ಇಲ್ಲ ಎಂದರೆ ಆ ಮಾತು ಬೇರೆ ಎಂದರು.

ಎರಡನೇ ಕ್ಷೇತ್ರವಾದ್ರೆ ಯಾವ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಿರಿ ಎಂಬ ಪ್ರಶ್ನೆಗೆ ಬೇರೆ ಕ್ಷೇತ್ರ ಆಯ್ಕೆ ಮಾಡೋದಾದ್ರೆ ಸವದತ್ತಿ ಕ್ಷೇತ್ರ ಒಂದೇ. ಯಾಕೆಂದರೆ ನಮ್ಮ ಪಕ್ಷ ಗೆಲ್ಲಬೇಕು ಎಂದು ಅಲ್ಲಿ ನಾವು ಸಂಘಟನೆ ಮಾಡುತ್ತಿದ್ದೇವೆ. ಸವದತ್ತಿ ಅಷ್ಟೇ ಅಲ್ಲದೇ ಗೋಕಾಕ್, ಅಥಣಿಯಲ್ಲಿಯೂ ಪಕ್ಷ ಗೆಲ್ಲಬೇಕು ಎಂದು ಸಂಘಟನೆ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಈ ಬಾರಿ 10-12 ಸ್ಥಾನಗಳನ್ನು ಬೆಳಗಾವಿ ಜಿಲ್ಲೆಯಲ್ಲಿ ಗೆಲ್ಲಲು ಪ್ರಯತ್ನಿಸುತ್ತಿದ್ದೇವೆ. ಕನಿಷ್ಠ 10, ಗರಿಷ್ಠ 12 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

Edited By : Manjunath H D
PublicNext

PublicNext

01/09/2022 07:01 pm

Cinque Terre

175.83 K

Cinque Terre

2

ಸಂಬಂಧಿತ ಸುದ್ದಿ