ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ತೊರೆದ ಮಾಜಿ ಸಂಸದ ಮುದ್ದ ಹನುಮೇಗೌಡ: ಮುಂದಿನ ನಡೆ ಏನು?

‍ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಮುದ್ದಹನುಮೇಗೌಡ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ತುಮಕೂರು ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಚುನಾವಣೆ ಹೊಸ್ತಿಲಲ್ಲಿ ಪಕ್ಷ ತೊರೆದಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ‌. ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಮುದ್ದ ಹನುಮೇಗೌಡ ಯಾವುದೇ ಕಾರಣ ನೀಡಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ನೀಡಿರುವ ಅವರು 'ದಯವಿಟ್ಟು ಅಂಗೀಕರಿಸಿ ಎಂದಿದ್ದಾರೆ. ಬರುವ ವಿಧಾನಸಭೆ ಚುನಾವಣೆಯಲ್ಲಿ ಹನುನೇಗೌಡ ಕುಣಿಗಲ್ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದರು. ಆದರೆ ಟಿಕೆಟ್ ನೀಡಲು ಕೆಪಿಸಿಸಿ ಅಧ್ಯಕ್ಷರು ನಿರಾಕರಿಸಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಚರ್ಚೆಗಳು ಶುರುವಾಗಿವೆ.

Edited By : Nagaraj Tulugeri
PublicNext

PublicNext

01/09/2022 09:34 pm

Cinque Terre

96.53 K

Cinque Terre

8

ಸಂಬಂಧಿತ ಸುದ್ದಿ