ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

LIVE: ಮಂಗಳೂರಿಗೆ ಆಗಮಿಸಿದ ನರೇಂದ್ರ ಮೋದಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಿದ್ದು, 3,800 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಪೊಲೀಸ್ ಸರ್ಪಗಾವಲು ವಹಿಸಲಾಗಿದೆ. ಎಸ್​ಪಿಜಿ ಅಧಿಕಾರಿಗಳಿಂದ ವೇದಿಕೆಯ ಭದ್ರತೆ ಪರಿಶೀಲನೆ ಮಾಡಿದ್ದು, ಕಾರ್ಯಕ್ರಮದ ವೇದಿಕೆ ಸುತ್ತ ತಡೆ ಬೇಲಿ ಹಾಕಿ ಭದ್ರತೆ ಹಾಕಲಾಗಿದೆ.

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದ್ದು, ಕೃಷಿ ಸಮ್ಮಾನ್, ವಿದ್ಯಾನಿಧಿ ಸೇರಿ ಹಲವು ಫಲಾನುಭವಿಗಳು ಭಾಗಿಯಾಗಲಿದ್ದಾರೆ. ಮತ್ತು ಭಾರತ ನಿರ್ಮಿಸಿದ ಐಎನ್​ಎಸ್ ವಿಕ್ರಾಂತ್​​​ ಯುದ್ಧ ಹಡಗನ್ನು ನಾಡಿಗೆ ಸರ್ಮಪಿಸಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಿಂದ ಜನ ಆಗಮಿಸುತ್ತಿದ್ದು, ಜನರನ್ನು ಕರೆತರಲು 2 ಸಾವಿರ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

Edited By : Vijay Kumar
PublicNext

PublicNext

02/09/2022 02:13 pm

Cinque Terre

61.51 K

Cinque Terre

7