ಬೆಂಗಳೂರು: ಹೊನ್ನಾಳಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಅವರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದಾಗಿನ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆಯಿಂದ ಬೆಂಗಳೂರಿನ ನೆಲಮಂಗಲದಲ್ಲಿ ಪ್ರಾಕೃತಿಕ ಚಿಕಿತ್ಸಾ ಕೇಂದ್ರ ಹಾಗೂ ಯೋಗ ವಿಜ್ಞಾನ ಕೇಂದ್ರ ನಿರ್ಮಿಸಲಾಗಿದೆ. ಇದರ ಉದ್ಘಾಟನೆಗಾಗಿ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಬಂದಿದ್ದರು.
ಈ ವೇಳೆ ಯೋಗಿಯನ್ನು ಭೇಟಿಯಾದ ರೇಣುಕಾಚಾರ್ಯ ಉಭಯ ಕುಶಲೋಪರಿಯ ಮಾತುಗಳನ್ನಾಡಿದ್ದಾರೆ. ಈ ಅನುಭವವನ್ನು ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
PublicNext
02/09/2022 09:13 pm