ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಕೈ ತೊರೆದ ಮುದ್ದಹನುಮೇಗೌಡ ಕಮಲ ಹಿಡಿಯುವುದು ಪಕ್ಕಾ !

ಬೆಂಗಳೂರು : ಕಳೆದ ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಬೈ ಬೈ ಹೇಳಿದ್ದ ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರುವುದು ಬಹುತೇಕ ಖಚಿತವಾದಂತೆ ಕಾಣ್ತಾ ಇದೆ.

ಹೌದು ! ರಾಜೀನಾಮೆ ಕೊಟ್ಟ ಬೆನ್ನಲ್ಲೇ ಬಿಜೆಪಿ ಸಂಸದೀಯ‌ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಮುದ್ದಹನುಮೇಗೌಡ ಪಕ್ಷ ಸೇರ್ಪಡೆ ಬಗ್ಗೆ ಮಾತನಾಡಿದ್ದಾರೆ ಎಂಬ ಮಾಹಿತಿ ಎಲ್ಲೇಡೆ ಹರಿದಾಡುತ್ತಿದೆ.

ಕುಣಿಗಲ್'ನಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಮುದ್ದಹನುಮೇಗೌಡ ಬಯಸಿದ್ದು, ತಮ್ಮ ಉದ್ದೇಶವನ್ನು ಯಡಿಯೂರಪ್ಪ ಅವರ ಮುಂದೆ ಸ್ಪಷ್ಟಪಡಿಸಿದ್ದಾರೆ. ಪಕ್ಷ ಸೇರ್ಪಡೆಗೆ ಸೂಕ್ತ ವೇದಿಕೆ ಕಲ್ಪಿಸುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದು, ಇನ್ನಷ್ಟು ನಾಯಕರ ಜತೆಗೆ ಒಮ್ಮೆಲೆ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಸೋಣ ಎಂದು ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Edited By :
PublicNext

PublicNext

03/09/2022 03:51 pm

Cinque Terre

29.12 K

Cinque Terre

0