ಬೆಳಗಾವಿ: ಬೆಳಗಾವಿ ಗಡಿ ವಿವಾದದ ಕುರಿತು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ವಿಚಾರವಾಗಿ ನವೆಂಬರ್ 23ರಂದು ಅದು ತನ್ನ ಅಂತಿಮ ವಿಚಾರಣೆ ಮಾಡಿ ತೀರ್ಪನ್ನು ನೀಡಲಿದೆ. ಇಂತಹ ಕ್ಲಿಷ್ಟಕರವಾದ ಸಂದರ್ಭದಲ್ಲಿ ನಮ್ಮ ಸರಕಾರ ಮಾತ್ರ ಗಾಢ ನಿದ್ರೆಯಲ್ಲಿದೆ. ಈ ವಿಷಯದ ಬಗ್ಗೆ ತೆಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು (ನಾರಾಯಣ ಗೌಡ ಬಣ) ಆಕ್ರೋಶ ವ್ಯಕ್ತಪಡಿಸಿದರು.
ಇಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮುಂಬರುವ ತೀರ್ಪಿನ ಸಾಧಕ ಭಾದಕಗಳ ಕುರಿತು ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ಅವರ ನೇತೃತ್ವದಲ್ಲಿ ಚಿಂತನ-ಮಂಥನ ಮಾಡಿದರು. ಇದೆ ವೇಳೆ, ಗಡಿ ಸಂರಕ್ಷಣಾ ಆಯೋಗಕ್ಕೆ ಅಧ್ಯಕ್ಷರ ನೇಮಕ ಮಾಡದ ಹಿನ್ನಲೆ ಸರಕಾರದ ವಿರುದ್ದ ಅಸಮಾಧಾನ ಹೋರ ಹಾಕಿ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮಹಾರಾಷ್ಟ್ರ ಸರಕಾರದಂತೆ ಕರ್ನಾಟಕ ಸರಕಾರವು ಕೂಡಲೇ ಈ ಬಗ್ಗೆ ಮುತುವರ್ಜಿ ವಹಿಸಿ ಗಡಿ ಸಂರಕ್ಷಣಾ ಆಯೋಗಕ್ಕೆ ಅಧ್ಯಕ್ಷ ನೇಮಕ ಮಾಡಬೇಕು ಹಾಗೂ ಈ ಕುರಿತು ಕನ್ನಡ ಪರ ಹೋರಾಟಗಾರ ಜೊತೆ ಸಭೆ ಕರೆದು ಚರ್ಚೆ ಮಾಡಬೇಕು. ಇದರ ಜೊತೆಯಾಗಿ ಬರುವ ರಾಜ್ಯೋತ್ಸವ ದಲ್ಲಿ ಕನ್ನಡ ನೆಲ, ಜಲಕ್ಕಾಗಿ ಹೋರಾಟ ಮಾಡುತ್ತಿರುವ ನಿಜವಾದ ಹೋರಾಟಗಾರರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು .
PublicNext
03/09/2022 10:45 pm