ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಕೈ' ಗೆ ಗುಡ್ ಬೈ ಹೇಳಿ ಕಮಲ ಪಾಳಯಕ್ಕೆ ಧುಮುಕಿದ ಎಸ್ ಪಿ ಎಂ

ತುಮಕೂರು: ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದ ತುಮಕೂರು ಮಾಜಿ ಸಂಸದ ಮುದ್ದಹನುಮೇಗೌಡ ಅವರು ಇದೀಗ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಬಳಿಕ ಅಸಮಾಧಾನಗೊಂಡಿದ್ದ ಮುದ್ದಹನುಮೇಗೌಡ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ತಮಗಾದ ಅನ್ಯಾಯದ ಬಗ್ಗೆ ಅಸಮಾಧಾನ ತೋಡಿಕೊಂಡಿದ್ದರು. ಅದರ ಬೆನ್ನಲ್ಲೇ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನೂ ನೀಡಿದ್ದರು.

ಇದೀಗ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿದ ಮುದ್ದ ಹನುಮೇಗೌಡ ತಾವು ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ಶನಿವಾರ ರಾತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಕುರಿತು ಪ್ರತಿಕ್ರಿಯಿಸಿರುವ ಅವರು, ನಾನು ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ. ಮುಖಂಡರ ಜತೆ ಮಾತನಾಡಿದ್ದೇನೆ. ಪಿತೃಪಕ್ಷ ಬರುವುದರೊಳಗೆ ಶೀಘ್ರದಲ್ಲೇ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗುತ್ತಿದ್ದೇನೆ ಎಂದಿದ್ದಾರೆ.

Edited By : Nirmala Aralikatti
PublicNext

PublicNext

04/09/2022 09:48 am

Cinque Terre

34.97 K

Cinque Terre

12

ಸಂಬಂಧಿತ ಸುದ್ದಿ