ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

8619 ಜನರಿಗೆ ಉದ್ಯೋಗಾವಕಾಶ : 2750.55 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ

ಬೆಂಗಳೂರು:ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯಮಿದಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಒಟ್ಟು 2750.55 ಕೋಟಿ ರೂ. ಮೊತ್ತದ 53 ಯೋಜನೆಗಳಿಗೆ ಅನುಮೋದನೆ ನೀಡಿದೆ.ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಶನಿವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ನೇತೃತ್ವದಲ್ಲಿ ನಡೆದ 134 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಯಿತು.

ಒಟ್ಟು 53 ಯೋಜನೆಗಳಿಂದ 2750.55 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 8619 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ. 50 ಕೋಟಿ ರೂ. ಗೂ ಹೆಚ್ಚು ಬಂಡವಾಳ ಹೂಡಿಕೆಯ ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ ರೂ. 1670.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 4000 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ.

ಇದೇ ರೀತಿ 15 ಕೋಟಿ ರೂ. ಯಿಂದ ರೂ.50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 41 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದ 1062.01 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು ಅಂದಾಜು 4311 ಜನರಿಗೆ ಉದ್ಯೋಗಗಳು ಸೃಜನೆಯಾಗಲಿವೆ.

ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗೆ ಅನುಮೋದನೆ ನೀಡಿದ್ದು, ಇದರಿಂದ 17.85 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಒಟ್ಟು 53 ಯೋಜನೆಗಳಿಂದ ರೂ. 2750.55 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 8619 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ.

ಹೂಡಿಕೆ ಹಾಗೂ ಉದ್ಯೋಗಗಳು:

ಉಕೇಮ್ ಅಗ್ರೀ ಇನ್ಪಾ ಲಿ. ₹497.95 ಕೋಟಿ ರೂ.

ಹೂಡಿಕೆ, ಉದ್ಯೋಗ - 425

ಸುಂದರಿ ಶುಗರ್ಸ್ ಲಿಮಿಟೆಡ್ - ₹402.24 ಕೋಟಿ ರೂ.

ಹೂಡಿಕೆ, ಉದ್ಯೋಗ-270

ಎವರೆಸ್ಟ್ ಇಂಡಸ್ಟ್ರೀಸ್ ಲಿಮಿಟೆಡ್ ₹187 ಕೋಟಿ ರೂ. ಹೂಡಿಕೆ, ಉದ್ಯೋಗ-120

ಕೊಪ್ಪಳ ಟಾಯ್ಸ್ ಮೋಲ್ಡಿಂಗ್ ಕೋ ಪ್ರೈವೇಟ್ ಲಿಮಿಟೆಡ್-131.94 ಕೋಟಿ ರೂ.ಹೂಡಿಕೆ, ಉದ್ಯೋಗ-800 ಅಕ್ವೀಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್-118.27 ಕೋಟಿ ರೂ. ಹೂಡಿಕೆ, ಉದ್ಯೋಗ-485 ಕೆಆರ್ ಬಿಎಲ್ ಲಿಮಿಟೆಡ್-110.25 ಕೋಟಿ ರೂ.

ಹೂಡಿಕೆ, ಉದ್ಯೋಗ-140 ಅಕ್ವೀಸ್ ಟಾಯ್ಸ್ ಪ್ರೈವೇಟ್ ಲಿಮಿಟೆಡ್ ಡಿಟಿಎ ಯುನಿಟ್- 72.58 ಕೋಟಿ ರೂ. ಹೂಡಿಕೆ, ಉದ್ಯೋಗ-550 ಹೆಲ್ಲಾ ಇನ್ಫ್ರಾ ಮಾರ್ಕೆಟ್ ಪ್ರೈವೇಟ್ ಲಿಮಿಟೆಡ್-71.66 ಕೋಟಿ ರೂ. ಹೂಡಿಕೆ, ಉದ್ಯೋಗ -1500 ಸಾವಿತ್ರಿ ಪ್ಲೈಬೋರ್ಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್- 49.86 ಕೋಟಿ ರೂ. ಹೂಡಿಕೆ, ಉದ್ಯೋಗ-515

Edited By : Nirmala Aralikatti
PublicNext

PublicNext

04/09/2022 01:44 pm

Cinque Terre

28.85 K

Cinque Terre

2

ಸಂಬಂಧಿತ ಸುದ್ದಿ