ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿ: ಬಿಜೆಪಿ ಸರಕಾರದಿಂದ ದಿನನಿತ್ಯ ಪಿಕ್ ಪಾಕೆಟ್; ಡಿಕೆಶಿ ಪಂಚ್

ದೆಹಲಿ: ಬಿಜೆಪಿ ಸರಕಾರ ದಿನನಿತ್ಯ ಜನಸಾಮಾನ್ಯರ ಜೇಬು ಪಿಕ್ ಪಾಕೆಟ್ ಮಾಡುತ್ತಿದೆ. ಬೆಲೆ ಏರಿಕೆಯಿಂದ ದೇಶವನ್ನು ರಕ್ಷಿಸಲು ನಾವೆಲ್ಲರೂ ಇಂದು ಹೋರಾಟ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ಯುವಕರು- ಮಹಿಳೆಯರು ಸೇರಿದಂತೆ ಸಮಾಜದ ಪ್ರತಿಯೊಬ್ಬ ಪ್ರಜೆಯನ್ನೂ ಸುಲಿಗೆ ಮಾಡಲಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದ್ದು, ಜನರ ಆದಾಯ ಪಾತಾಳಕ್ಕೆ ಕುಸಿಯುತ್ತಿದೆ. ಇದರ ವಿರುದ್ಧ ಭಾರತ ರಾಷ್ಟ್ರೀಯ ಕಾಂಗ್ರೆಸ್ ದೆಹಲಿ ಚಲೋ ಪ್ರತಿಭಟನೆ ಮಾಡುತ್ತಿದೆ ಎಂದರು.

ಜನಸಾಮಾನ್ಯರ ಬದುಕು ಹಸನಾಗಬೇಕು, ಬೆಲೆ ಏರಿಕೆಯಿಂದ ಆಗುತ್ತಿರುವ ತೊಂದರೆಯಿಂದ ಎಲ್ಲಾ ವರ್ಗದ ಜನರನ್ನು ರಕ್ಷಿಸಬೇಕು ಎಂದು ನಾವು ಪ್ರತಿಭಟಿಸುತ್ತಿದ್ದೇವೆ. ಎಲ್ಲರೂ ಈ ಪ್ರತಿಭಟನೆಗೆ ಬೆಂಬಲಿಸಬೇಕು ಎಂದರು.

Edited By :
PublicNext

PublicNext

04/09/2022 08:10 pm

Cinque Terre

148.69 K

Cinque Terre

8

ಸಂಬಂಧಿತ ಸುದ್ದಿ