ಜಾರ್ಖಂಡ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಿದ್ದಾರೆ. 81 ಶಾಸಕರ ಜಾರ್ಖಂಡ ವಿಧಾನಸಭೆಯಲ್ಲಿ 48 ಶಾಸಕರು ಮುಖ್ಯಮಂತ್ರಿ ಹೇಮಂತ್ ಸೊರೆನ್ ಪರವಾಗಿ ಮತ ಚಲಾಯಿಸಿದ್ದಾರೆ.
ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನೇತೃತ್ವದ ಒಕ್ಕೂಟವು ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪದ ನಡುವೆ ಈ ವಿಶ್ವಾಸಮತ ಯಾಚನೆ ನಡೆದಿತ್ತು. ವಿಶೇಷ ಒಂದು ದಿನದ ಅಧಿವೇಶನದ ಕಲಾಪಗಳ ಉದ್ದಕ್ಕೂ ಪ್ರತಿಭಟಿಸಿದ ಪ್ರತಿಪಕ್ಷ ಬಿಜೆಪಿ, ಮತದಾನಕ್ಕೂ ಮುನ್ನವೇ ಸದನದಿಂದ ಹೊರನಡೆದಿದೆ.
ಇತ್ತ ಭ್ರಷ್ಟಾಚಾರದ ಆರೋಪದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಜಾರ್ಖಂಡ ವಿಧಾನಸಭೆಯಲ್ಲಿ ನಡೆಸಿದ ಬಹುಮತ ಪರೀಕ್ಷೆಯಲ್ಲಿ ಜಯಗಳಿಸಿದ್ದಾರೆ.
ಮತದಾನದ ಮೊದಲು ಮಾತನಾಡಿದ ಹೇಮಂತ್ ಸೊರೆನ್, ಚುನಾವಣೆಯಲ್ಲಿ ಗೆಲ್ಲಲು ಗಲಭೆಗಳನ್ನು ಉತ್ತೇಜಿಸುವ ಮೂಲಕ ಬಿಜೆಪಿ ದೇಶದಲ್ಲಿ ಅಂತರ್ಯುದ್ಧದಂತಹ ಪರಿಸ್ಥಿತಿಯನ್ನು ತರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
PublicNext
05/09/2022 05:38 pm