ಬೆಂಗಳೂರು: ರಾಜ್ಯ ಸರ್ಕಾರದಿಂದ ಬಡತನ ರೇಖೆಗಿಂತ ಕೆಳಗಿರುವಂತ ಬಿಪಿಎಲ್ ಪಡಿತರ ಚೀಟಿದಾರ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿತ್ತು.ಆದರೆ ಇದೀಗ ಈ ಯೋಜನೆಯನ್ನು ಹಿಂಪಡೆದು ಬಿಗ್ ಶಾಕ್ ನೀಡಿದೆ ಎಂದು ಕೆಲವು ವೆಬ್ ಮಾಧ್ಯಮಗಳು ವರದಿ ಮಾಡಿದ್ದು, ಈ ಕುರಿತು ಇಂಧನ ಸಚಿವ ಸುನಿಲ್ಕುಮಾರ್ ಸ್ಪಷ್ಟನೆ ನೀಡಿದ್ದು, ಉಚಿತ ವಿದ್ಯುತ್ ಪಡೆಯಲು ಈ ಹಿಂದೆ ಇದ್ದ ನಿಯಮಾವಳಿಗಳಲ್ಲಿ ಸಡಿಲಿಕೆ ಮಾಡಿ ಹಿಂದಿನ ಆದೇಶ ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ವಿನೋದ್ಕುಮಾರ್ ಡಿ.ಎಂ ಶನಿವಾರ ಪರಿಷ್ಕೃತ ಸುತ್ತೋಲೆ ಹೊರಡಿಸಿದ್ದು, ಈ ಸುತ್ತೋಲೆಯಲ್ಲಿ ಆ 24ರಂದು ಹೊರಡಿಸಿದ್ದ ಸುತ್ತೋಲೆ ಸಂಖ್ಯೆಯನ್ನು ಉಲ್ಲೇಖಿಸಿ ಈ ಸುತ್ತೋಲೆಯನ್ನು ಹಿಂಪಡೆಯಲಾಗಿದೆ ಎಂದು ಹೇಳಲಾಗಿದೆ. ಆದರೆ ಈ ಆದೇಶವು ಎಸ್ಸಿ ಎಸ್ಟಿ ಸಮುದಾಯಗಳ ಉಚಿತ ವಿದ್ಯುತ್ ಯೋಜನೆಯ ರದ್ದತಿ ಆದೇಶವಲ್ಲ, ಕೆಲವರು ಸರಕಾರಿ ಸುತ್ತೋಲೆಯ ಅಂಶಗಳನ್ನು ಅರ್ಥ ಮಾಡಿಕೊಳ್ಳದೇ ಜನರ ದಿಕ್ಕುತಪ್ಪಿಸುವ ಮಾಹಿತಿ ನೀಡುತ್ತಿದ್ದಾರೆ, ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸುನಿಲ್ ಸ್ಪಷ್ಟಪಡಿಸಿದ್ದಾರೆ.
PublicNext
05/09/2022 10:10 pm