ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಚಿತ ವಿದ್ಯುತ್, 500 ರೂ.ಗೆ ಸಿಲಿಂಡರ್ : ರಾಹುಲ್ ಗಾಂಧಿ ಭರವಸೆ!

ಗುಜರಾತ್ : ಗುಜರಾತ್ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರ್ಜರಿ ಭರವಸೆ ನೀಡಿದ್ದಾರೆ.

ಹೌದು ರಾಗಾ ಈಗಿನಿಂದಲೇ ಚುನಾವಣೆ ಕಸರತ್ತು ನಡೆಸಿದ್ದು,ಮತದಾರರ ಗಮನ ಸೆಳೆಯಲು ಭರವಸೆಗಳ ಮಹಾಪೂರ ಹರಿಸಿದ್ದಾರೆ.

ಗುಜರಾತ್ ಅಹಮ್ಮದಬಾದ್ ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪರಿವರ್ತನಾ ಸಂಕಲ್ಪ ರ್ಯಾಲಿಯಲ್ಲಿ ಪಾಲ್ಗೊಂಡ ಅವರು ಹಲವು ಕೊಡುಗೆ ಘೋಷಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನವ ಗುಜರಾತ್ ನಿರ್ಮಿಸುವುದಾಗಿ ಭರವಸೆ ನೀಡಿದ್ದಾರೆ.

ರೈತರು ಪಡೆದಿರುವ 3 ಲಕ್ಷ ರೂಪಾಯಿ ವರೆಗಿನ ಸಾಲಗಳನ್ನು ಮನ್ನಾ ಮಾಡಲಾಗುವುದು.

3000 ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು ತೆರೆದು ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡಲಾಗುವುದು.

500 ರೂಪಾಯಿಗೆ ಅಡುಗೆ ಗ್ಯಾಸ್ ಸಿಲಿಂಡರ್ ಲಭ್ಯ.

ಹೈನುಗಾರಿಕೆಯಲ್ಲಿನ ಹಾಲು ಉತ್ಪಾದಕರಿಗೆ 5 ರೂಪಾಯಿ ಸಬ್ಸಡಿ.

ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ.

ರೈತರಿಗೆ ಸಂಪೂರ್ಣ ಉಚಿತ ವಿದ್ಯುತ್ ನೀಡಲಾಗುವುದು. ಜನಸಾಮಾನ್ಯರಿಗೆ 300 ಯೂನಿಟ್ ವಿದ್ಯುತ್ ಉಚಿತ.

ಗುಜರಾತ್ ಯುವಕರಿಗೆ 10 ಲಕ್ಷ ಉದ್ಯೋಗ ಸೃಷ್ಟಿ ಭರವಸೆ ನೀಡಿದ್ದಾರೆ.

Edited By : Nirmala Aralikatti
PublicNext

PublicNext

05/09/2022 10:31 pm

Cinque Terre

67.28 K

Cinque Terre

78

ಸಂಬಂಧಿತ ಸುದ್ದಿ