ನವದೆಹಲಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನ ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಎಚ್.ಡಿ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ಸಾಥ್ ನೀಡಿದರು. ಮೈಸೂರು ದಶಪಥ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನ ಭೇಟಿ ಮಾಡಲು ಕುಮಾರಸ್ವಾಮಿ ದೆಹಲಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ನಿತೀಶ್ ಕುಮಾರ್ ಅವರನ್ನೂ ಭೇಟಿ ಮಾಡಿದ್ದಾರೆ.
ನಿತೀಶ್ ಕುಮಾರ್ ಭೇಟಿ ಬಳಿಕ ಮಾತನಾಡಿದ ಹೆಚ್ಡಿಕೆ, ಜನತಾ ಪರಿವಾರ ಒಗ್ಗೂಡುವ ಬಗ್ಗೆ ಮಾತುಕತೆ ನಡೆಯಿತು. ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲರೂ ಒಗ್ಗೂಡುವ ಅವಶ್ಯಕತೆ ಇದೆ. ಮೊನ್ನೆಯ ಬಿಹಾರದ ರಾಜಕೀಯ ಬೆಳವಣಿಗೆಗಳ ನಂತರ ಮತ್ತೆ ಈ ಚರ್ಚೆಗೆ ಚಾಲನೆ ಸಿಕ್ಕಿದೆ. ಜೆ.ಪಿ. ಅವರಿಂದ ಪ್ರಾರಂಭವಾದ ಜನತಾ ಪರಿವಾರ ಮತ್ತೆ ಒಂದುಗೂಡಬೇಕಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
PublicNext
05/09/2022 10:58 pm