ಕಾರವಾರ: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಸೆ.17ರಂದು ಅಂತರರಾಷ್ಟ್ರೀಯ ಕಡಲತೀರಗಳ ಸ್ವಚ್ಛತಾ ದಿನಾಚರಣೆ ಹಾಗೂ ವಿಶ್ವ ಪ್ರವಾಸೋದ್ಯಮ ದಿನವನ್ನ ಆಚರಿಸಲಾಗುತ್ತಿದ್ದು, ಇದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರು ಜಿಲ್ಲೆಗೆ ಆಗಮಿಸುತ್ತಿದ್ದಾರೆ ಎನ್ನಲಾಗಿದೆ.
ರಾಜ್ಯಪಾಲರ ಆಗಮನದ ಹಿನ್ನೆಲೆಯಲ್ಲಿ ಇಂದು ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಸಿದ್ಧತೆ, ರಾಜ್ಯಪಾಲರಿಗಾಗಿ ಮಾಡಿಕೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎನ್ನಲಾಗಿದೆ. ಆದರೆ, ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಮಾಹಿತಿ ಬಂದ ಬಳಿಕವೇ ಜಿಲ್ಲಾಡಳಿತ ಅವರ ಪ್ರವಾಸವನ್ನ ಖಚಿತಪಡಿಸಲಿದೆ ಎನ್ನಲಾಗಿದೆ.
PublicNext
06/09/2022 11:13 am