ಮೈಸೂರು: ಮೈಸೂರು ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು ಬಿಜೆಪಿ ಗಳಿಸಿರುವುದು ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಎರಡು ಸ್ಥಾನಗಳನ್ನು ಬಿಜೆಪಿ ಗೆದ್ದಿದ್ದರೂ, ಮುಂದಿನ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಕಾಂಗ್ರೆಸ್ ಅವಧಿಯಲ್ಲಿ ಆಗಿರುವ ಹಿನ್ನಡೆಯನ್ನು ಗಮನಿಸಿರುವ ನಗರಪಾಲಿಕೆ ಸದಸ್ಯರು ಬಿಜೆಪಿ ಬೆಂಬಲಿಸಿದ್ದಾರೆ.
ಈ ಬಾರಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಯಿತು. ಸಂಖ್ಯಾ ಬಲದ ಆಧಾರದ ಮೇಲೆ ಸ್ಪರ್ಧೆಗೆ ಮುಂದಾದೆವು. ಉಪ ಮೇಯರ್ ಸ್ಥಾನಕ್ಕಾಗಿ ಜೆಡಿಎಸ್ ಕೂಡ ಯತ್ನಿಸಿತು. ಆದರೆ ತಾಂತ್ರಿಕವಾಗಿ ಜೆಡಿಎಸ್‌ಗೆ ಸೋಲಾಯಿತು ಎಂದು ಹೇಳಿದ್ದಾರೆ.
PublicNext
06/09/2022 07:56 pm